ಅಧಿಕ ಪ್ರಸಂಗತನ ಬೇಡ ಬೆಳಗಾವಿ ನಮ್ಮದು / ಉದ್ಧವ್ ಠಾಕ್ರೆ ಹೇಳಿಕೆಗೆ BSY, HDK, ಸಿದ್ದರಾಮಯ್ಯ ಗುದ್ದು

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ವಿವಾದಿತ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳು ಉದ್ಧವ್ ಠಾಕ್ರೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿವೆ.

ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಮುಖ್ಯಮಂತ್ರಿಗಳು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಹ ಉದ್ದವ್ ಠಾಕ್ರೆಯ ಹೇಳಿಕೆಯನ್ನು ಖಂಡಿಸಿದ್ದು, ‘ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. 

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. 

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಹ ಉದ್ಧವ್‌ ಠಾಕ್ರೆ ಹೇಳಿಕೆಯನ್ನು ಖಂಡಿಸಿದ್ದು,‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು  ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ. 

ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ. 

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ. 

ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ. 

ಬೆಳಗಾವಿ ಸಾಂಸ್ಕೃತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್‌ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ. 

ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ.

ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]