
ದೊಡ್ಡಬಳ್ಳಾಪುರ: ಇದೇ ಜನವರಿ ತಿಂಗಳಿಗೆ ಸಂಬಂಧಿಸಿದ ಪಡಿತರ ಆಹಾರ ಧಾನ್ಯವನ್ನು ಬಿಡುಗಡೆ ಮಾಡಲಾಗಿದ್ದು, ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯ ಪಡೆದುಕೊಳ್ಳಬಹುದೆಂದು ಆಹಾರ ಶಿರಸ್ತೆದಾರ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಅವರು ನೀಡಿರುವ ಮಾಹಿತಿಯಂತೆ, ಅಂತ್ಯೋದಯ ಪಡಿತರ ಚೀಟಿ ಕಾರ್ಡ್ದಾರರಿಗೆ ಪ್ರತಿ ಕಾರ್ಡಿಗೆ ಉಚಿತವಾಗಿ 35 ಕೆಜಿ ಅಕ್ಕಿ ಹಾಗೂ (1 ಕೆ.ಜಿ ಕಡಲೆ ಕಾಳು ನಗರ ವ್ಯಾಪ್ತಿಗೆ ಮಾತ್ರ) ವಿತರಿಸಲಾಗುವುದು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ, ಪ್ರತಿ ಕಾರ್ಡ್ಗೆ 2 ಕೆಜಿ ಗೋದಿ, (1 ಕೆ.ಜಿ ಕಡಲೆಕಾಳು ನಗರವ್ಯಾಪ್ತಿಗೆ ಮಾತ್ರ) ಉಚಿತವಾಗಿ ವಿತರಿಸಲಾಗುವುದು.
ಎಪಿಎಲ್ ಪಡಿತರ ಚೀಟಿ ಹೊಂದಿರುವ, ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಪ್ರತಿ ಕೆ.ಜಿ ಗೆ ರೂ.15 ರಂತೆ ಏಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ ಅಕ್ಕಿ ವಿತರಿಸಲಾಗುವುದು.
ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಡ್ಡಾಯವಾಗಿ ಬೆರಳಚ್ಚು ಮೂಲಕ ಹಾಗೂ ಬೆರಳಚ್ಚು ಬಾರದ ಕಾರ್ಡ್ ದಾರರು ಆಧಾರ್ ಓ.ಟಿ.ಪಿ ಮೂಲಕ ಪಡಿತರ ವಿತರಣೆ ಮಾಡಲಾಗುವುದು.
ಕರೊನಾ ಸೋಂಕು ಹರಡುವಿಕೆ ತಡೆಯಲು ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರದಲ್ಲಿ ನಿಂತು ಪಡಿತರ ಆಹಾರಧಾನ್ಯ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಿ ನಮ್ಮೊಂದಿಗೆ ಜೊತೆಯಾಗಿ.

