ಕೃಷಿ ಕಾಯ್ದೆ ವಿರೋಧಿಸಿ ಜ.26ರಂದು ರೈತರ ಜಾಥಾ ನಿಶ್ಚಿತ: ಕೋಡಿಹಳ್ಳಿ ಚಂದ್ರಶೇಖರ್ / ದೊಡ್ಡಬಳ್ಳಾಪುರದಲ್ಲಿ ಜನ ಜಾಗೃತಿ ಜಾಥಾದ ಸಮಾರೋಪ ಹಾಗೂ ರೈತ ಮಹಿಳೆಯರ ಪ್ರತಿಭಟನಾ ಮೆರವಣಿಗೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ, ಕಾರ್ಮಿಕ ಹಕ್ಕುಗಳ ಉಳಿವಿಗಾಗಿ, ಆಹಾರ ಭದ್ರತೆ, ಉದ್ಯೋಗದ ಉಳಿವಿಗಾಗಿ,  ಪೆಟ್ರೋಲ್,ಡೀಸೆಲ್, ಅಡಿಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡ ಪರ ಸಂಘಟನೆಗಳ ವತಿಯಿಂದ ತಾಲೂಕಿನಾದ್ಯಂತ ಜನ ಜಾಗೃತಿ ಜಾಥಾದ ಸಮಾರೋಪದ ಅಂಗವಾಗಿ ನಗರದಲ್ಲಿ ಜನ ಜಾಗೃತಿ ಜಾಥಾದ ಸಮಾರೋಪ ಹಾಗೂ ರೈತ ಮಹಿಳೆಯರ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಸಭೆಯಲ್ಲಿ ದೆಹಲಿ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರಿಗೆ ಸಂತಾಪ ಸೂಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಎರಡು ತಿಂಗಳಿನಿಂದ ದಹಲಿಯಲ್ಲಿ ಲಕ್ಷಾಂತರ ರೈತರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ರೈತರ ಹೋರಾಟಕ್ಕೆ ಸರ್ಕಾರ ಬೆಚ್ಚಿದೆ. ಆದರೆ ಕೃಷಿ ಕಾಯ್ದೆಗಳ ಪರವಾಗಿ ಆರ್‍ಎಸ್‍ಎಸ್ ಹಾಗೂ ಬಿಜೆಪಿ ಮುಖಂಡರ ಬಾಯಲ್ಲಿ ಮಾತನಾಡಿಸುತ್ತಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಜನವರಿ 26ರಂದು ದೆಹಲಿಗೆ ತೆರಳುವುದು ನಿಶ್ಚಿತವಾಗಿದ್ದು, ಗಣರಾಜ್ಯೋತ್ಸವದಂದು ಮುಖ್ಯಮಂತ್ರಿ ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದ  ನಂತರ ಬೆಂಗಳೂರಿನಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ರಾಷ್ಟ್ರಧ್ವಜ, ಹಸಿರು ಧ್ವಜಗಳನ್ನು ಹಿಡಿದು,  ಟ್ರ್ಯಾಕ್ಟರ್‍ಗಳನ್ನು ಚಲಾಯಿಸಿಕೊಂಡು ಜಾಥಾ ನಡೆಸಲಿದ್ದಾರೆ. ಹೋರಾಟವನ್ನು ಹತ್ತಿಕ್ಕುವುದು ಸರ್ಕಾರದ ಉದ್ದೇಶವಾಗಿದ್ದು, ಆದರೆ ನಮ್ಮ ಹಕ್ಕನ್ನು ನಾವು ಚಲಾಯಿಸಲಿದ್ದೇವೆ ಎಂದರು.

ಪ್ರಧಾನಿ ಮೋದಿ ಸುಳ್ಳು ಹೇಳುವುದರಲ್ಲಿ ಪರಿಣಿತರಾಗಿದ್ದು, ಚುನಾವಣೆಗೆ ಮುನ್ನ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವ ಕುರಿತಾಗಿ ಸ್ವಾಮಿನಾಥನ್ ವರದಿ ಬಗ್ಗೆ ಚಕಾರವಿಲ್ಲ. ಕೃಷಿ ಕಾಯ್ದೆ ತಿದ್ದುಪಡಿ ಮಾಡುವುದಾದರೆ, ಸ್ವಾಮಿ ನಾಥನ್ ವರದಿಯಂತೆ ಪ್ರತಿ ವರ್ಷ ಕನಿಷ್ಟ ಬೆಂಬಲ ಬೆಲೆ ಪರಿಷ್ಕರಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕಿದೆ ಎಂದರು.

ಕೇಂದ್ರದ ಎಪಿಎಂಸಿ ಕಾಯ್ದೆ, ವಿವಿಧ ಕೃಷಿ ಮಸೂದೆಗಳು ಹಾಗೂ  ರಾಜ್ಯದಲ್ಲಿ ಜಾರಿ ಮಾಡಿರುವ ಭೂ ಸುಧಾರಣಾ ಕಾಯ್ದೆಯಿಂದ ಹಣವಂತರು ಹಾಗೂ ಕಾರ್ಪೋರೇಟ್‍ಗಳಿಗೆ ಅನುಕೂಲವಾಗಿ ರೈತರಿಗೆ ಅನ್ಯಾಯವಾಗುವ ಈ ಕಾಯ್ದೆಗಳು ಯಾವುದೇ ಕಾರಣಕ್ಕೂ ಜಾರಿಯಾಗದಂತೆ ತೀವ್ರ ಹೋರಾಟ ಮಾಡಬೇಕಿದೆ. ರೈತರ ತಮ್ಮ ಮಾರಾಟ ವ್ಯವಸ್ಥೆಯನ್ನು ಸುಗಮವಾಗಿ ರೂಪಿಸಿಕೊಂಡಿರುವ ಎಪಿಎಂಸಿ ವ್ಯವಸ್ಥೆಯು ಹೊಸ ಎಪಿಎಂಸಿ ಕಾಯ್ದೆಯಿಂದ ರೈತರ ಕೈತಪ್ಪಿ ಬಂಡವಾಳ ಶಾಹಿಗಳ ಹಿಡತಕ್ಕೆ ಹೋಗುತ್ತದೆ ಅಂತೆಯೇ ಭೂಸುಧಾರಣಾ ಕಾಯ್ದೆ ಸಹ ರೈತರಿಂದ ಉಳ್ಳವರ ಪಾಲಾಗುತ್ತಿದ್ದು, ಈಗಾಗಲೇ ರೈತರ ಉತ್ಪನ್ನಗಳನ್ನು ಕಂಪನಿಗಳು ಖರೀದಿಸಿ ಹಿಡಿತ ಸಾಧಿಸಲು ಹೊರಟಿವೆ. ವಿದ್ಯುತ್ ಖಾಸಗೀಕರಣ, ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣದಿಂದ ಮುಂದೆ ಜನರ ಬದುಕು ದುಸ್ತರವಾಗಲಿದೆ. ಈಗ ಜಾರಿಗೆ ತರುತ್ತಿರುವ ಗೋಹತ್ಯೆ ನಿಷೇಧ ಕಾನೂನು ವಿರೋಸಿ ಜಾನುವಾರುಗಳನ್ನು ಹೊಡೆದುಕೊಂಡು ವಿಧಾನಸೌಧಕ್ಕೆ ತೆರಳಿ ಪ್ರತಿಭಟಿಸಬೇಕಿದೆ ಎಂದರು.

ಸಿಪಿಐಎಂ ಮುಖಂಡ ಕೆ.ಎನ್.ಉಮೇಶ್  ಮಾತನಾಡಿ, ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಇತ್ತೀಚೆಗೆ ಜಾರಿಗೆ ತರುತ್ತಿರುವ ಎಲ್ಲಾ ಕಾಯ್ದೆಗಳು ಜನ ವಿರೋಧಿಯಾಗಿವೆ. ಇದಲ್ಲದೇ 2016ರಲ್ಲಿ ಜಾರಿಗೆ ತಂದಿರುವ ಪಾಪರಿಕೆ ಹಾಗೂ ದಿವಾಳಿತನ ಸಂಹಿತೆಯಿಂದ ಸಾವಿರಾರು ಕೋಟಿ ರೂ ಸಾಲ ಮಾಡಿ ಕೈಚೆಲ್ಲಿರುವ ಉದ್ಯಮಿಗಳಿಗೆ ಸಹಕಾರಿಯಾಗಲಿದೆ.ಕಾರ್ಮಿಕ ಸಂಹಿತೆಗಳಾದ ವೇನತ ಸಂಹಿತೆ, ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ, ಉದ್ಯೋಗ ಸುರಕ್ಷತೆ  ಮೊದಲಾದ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ವಿರೋಧವಾಗಿದ್ದು, ಸರ್ಕಾರಗಳು ಹಠಕ್ಕೆ ಬಿದ್ದು, ಕಾಯ್ದೆಗಳನ್ನು ಜಾರಿ ಮಾಡುತ್ತಿವೆ. ಕೇಂದ್ರ ಸರ್ಕಾರಕ್ಕೆ ಹೋರಾಟದ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಸಭೆಯಲ್ಲಿ ರೈತ, ದಲಿತ, ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರಾದ ಆರ್.ಚಂದ್ರತೇಜಸ್ವಿ, ಪ್ರಸನ್ನ,ಸತೀಶ್, ಸುಲೋಚನಮ್ಮ ವೆಮಕಟರೆಡ್ಡಿ, ಸಿದ್ದಲಿಂಗಯ್ಯ,ಸಿ.ಎಚ್.ರಾಮಕೃಷ್ಣ, ಹನುಮೇಗೌಡ, ಡಾ.ರಕ್ಷಿತ್, ಸಂಜೀವ್ ನಾಯಕ್,ಡಿ.ಪಿ.ಆಂಜನೇಯ,  ರಾಜು ಸಣ್ಣಕ್ಕಿ, ಪುರುಷೋತ್ತಮ್,ಪಿ.ಎ.ವೆಂಕಟೇಶ್, ರೇಣುಕಾರಾದ್ಯ, ರುದ್ರಾರಾದ್ಯ, ನಳಿನಾಕ್ಷಿ, ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಿ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]