
ದೊಡ್ಡಬಳ್ಳಾಪುರ: 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಹರಿಲೇಖನಿಗೆ ಮಾಹಿತಿ ನೀಡಿರುವ ಅವರು, ಪ್ರತಿ ವರ್ಷದಂತೆ ಈ ವರ್ಷವೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಇಚ್ಛಿಸುವ ಸಾಧಕರು ತಮ್ಮ ಸಾಧನೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಮತ್ತು ವೈಯಕ್ತಿಕ ಮಾಹಿತಿಯನ್ನು ತಹಶೀಲ್ದಾರ್ ಕಚೇರಿಯ ಕಸಬಾ ರಾಜಸ್ವ ನಿರೀಕ್ಷಕರಿಗೆ ಜ.22ರ ಸಂಜೆ 5ಗಂಟೆಯವರೆಗೆ ಅವಕಾಶ ನೀಡಲಾಗಿದೆ. ನಿಗದಿತ ಸಮಯದ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

