ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂ.ಗ್ರಾ.ಜಿಲ್ಲೆ: ಮಕ್ಕಳಿಗೆ ಬಾಲ್ಯದಲ್ಲಿ ಅತಿ ಶಿಕ್ಷಣ ಮುಖ್ಯವಾಗಿದ್ದು, ಶಿಕ್ಷಣ ಕೊಡಿಸಬೇಕೆ ಹೊರತು ಮಕ್ಕಳಿಂದ ದುಡಿಮೆ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದಲ್ಲಿ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಇವರ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ನಡೆದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ‘ಬಾಲ್ಯಾವಸ್ಥೆ ಮತ್ತು ಕಿಶೋರ ವ್ಯವಸ್ಥೆ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಮತ್ತು ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಜನ ಜಾಗೃತಿ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದ ಕೆಲಸಗಳಲ್ಲಿ ನೇಮಿಸಿಕೊಳ್ಳುವಂತಿಲ್ಲ ಹಾಗೂ 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರ ವ್ಯವಸ್ಥೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರ ಅಡಿಯಲ್ಲಿ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ 2 ವರ್ಷದವರೆಗೂ ಕಾರಾಗೃಹ ಶಿಕ್ಷೆ ಅಥವಾ 20 ಸಾವಿರಕ್ಕಿಂತ ಕಡಿಮೆ ಇಲ್ಲದೆ ಹಾಗೂ 50 ಸಾವಿರದವರೆಗೆ ದಂಡ ವಿಧಿಸಬಹುದಾಗಿದೆ ಹಾಗೂ ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015ರ ಪ್ರಕಾರ 18 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಂಡಲ್ಲಿ 5 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸುವ ಅವಕಾಶ ಇದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ಮಾತನಾಡಿ, ಸಂಬಂಧಿಸಿದ ಇಲಾಖೆಗಳು ಈಗಾಗಲೇ ನೆಲಮಂಗಲ ಸೇರಿದಂತೆ ವಿವಿಧ ನಗರ ಪ್ರದೇಶದಲ್ಲಿ ದಿಢೀರ್ ದಾಳಿ ನಡೆಸಿ ಹಲವಾರು ಮಕ್ಕಳನ್ನು ರಕ್ಷಿಸಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದರಲ್ಲದೆ, ಬಾಲ ಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಬಹುದು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭವ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಸಿಬ್ಬಂದಿಗಳಾದ ಕರಿಯಪ್ಪ, ಕಾವ್ಯ, ಮುರಳಿ, ಮಂಜುನಾಥ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]