
ಬೆಂ.ಗ್ರಾ.ಜಿಲ್ಲೆ: ಕನ್ಯಾಕುಮಾರಿ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಭೆ ಜ.29ಕ್ಕೆ ನಡೆಯಲಿದೆ.
ಈ ಕುರಿತು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಪ್ರಕಟಣೆ ನೀಡಿದ್ದು ಜಿಪಂ ಉಪಾಧ್ಯಕ್ಷ ಸ್ಥಾನದ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ 2021ರ ಜನವರಿ 29 ರಂದು ಮಧ್ಯಾಹ್ನ 12:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

