
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಶ್ರೀ ವೀರೇಂದ್ರ ಹೆಗ್ಗಡೆ ಯವರ ನೇತೃತ್ವದಲ್ಲಿ ಏ.29ರಂದು 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ವರದಕ್ಷಿಣೆ ಹಾಗೂ ಮದುವೆಯಾಗುವ ದುಂದುವೆಚ್ಚವನ್ನು ತಡೆಯುವುದು ಉದ್ದೇಶದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ವನ್ನು ಪ್ರತಿವರ್ಷ ನಡೆಸಲಾಗುತ್ತಿದೆ. ಇಲ್ಲಿಯವರೆಗೆ 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಚಿಸುವವರು ಏ.15ರ ಒಳಗೆ ಸವಿವರ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ವರನಿಗೆ ಧೋತಿ, ಶಾಲು ಮತ್ತು ಮದುವಿಗೆ ಸೀರೆ ,ರವಿಕೆ ಕಣ, ಹಾಗೂ ಮಂಗಳಸೂತ್ರ, ಹೂವಿನ ಹಾರ ನೀಡಲಾಗುತ್ತಿದೆ. ಅಲ್ಲದೆ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ ಎಂದಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – ದೂರವಾಣಿ: 080256-266644. ವಾಟ್ಸಪ್ ನಂ:8147263422, 9663464648
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

