
ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯ ವಿವೇಕಾನಂದ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಸಾಂಸ್ಕೃತಿಕ ಉತ್ಸವ 2020-21 ಮಹಿಳೆಯರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಜನಪದ ಕಲಾಪ್ರಕಾರಗಳು, ವಿಚಾರ ಸಂಕಿರಣ, ಉಪನ್ಯಾಸ, ಮಹಿಳಾ ಕವಿಗೋಷ್ಠಿ, ಚಿತ್ರಕಲಾ ಶಿಬಿರ, ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

