ಸಾಹಿತ್ಯ ಸಮ್ಮೇಳನ – ಶಿಷ್ಟಾಚಾರ ಹಾಗೂ ಸುರಕ್ಷಾ ಸಮಿತಿ ಪೂರ್ವಭಾವಿ ಸಭೆ / ಶಿಷ್ಟಾಚಾರ ಪಾಲನೆ ಹಾಗೂ ಸುರಕ್ಷತೆಗೆ ಹೆಚ್ಚಿನ ಕ್ರಮ: ಎ.ಎಸ್.ಪಿ. ಬಾಲದಂಡಿ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಗೆ ಹಾಗೂ ಸಾಹಿತ್ಯಾಸಕ್ತರ ಸುರಕ್ಷತೆ ಹಾಗೂ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರ ವಹಿಸಲಾಗುವುದು ಎಂದು ಸಮ್ಮೇಳನದ ಶಿಷ್ಟಾಚಾರ ಹಾಗೂ ಸುರಕ್ಷಾ ಸಮಿತಿ ಅಧ್ಯಕ್ಷ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಶನಿವಾರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮ್ಮೇಳನದ ಶಿಷ್ಟಾಚಾರ ಹಾಗೂ ಸುರಕ್ಷಾ ಸಮಿತಿಯ ಪೂರ್ವಭಾವಿ ಸಭೆ ನಡೆಸಿ ಕಾರ್ಯಯೋಜನೆ ಕುರಿತಂತೆ ಸಮಿತಿಯ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಸಮ್ಮೇಳನದ ವೇದಿಕೆಗಳು, ಪುಸ್ತಕ ಮಳಿಗೆಗಳು, ಪಾಕಶಾಲೆಯಲ್ಲಿ ಬೆಂಕಿ ಅವಘಡ, ವಿದ್ಯುತ್ ಅವಘಡ, ಜನದಟ್ಟಣೆಯ ನಿಯಂತ್ರಣ, ವಾಹನ ನಿಲುಗಡೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತಂತೆ ಸಲಹೆ ನೀಡಿದರು. 

ಸಮ್ಮೇಳನದ ಸಂದರ್ಭದಲ್ಲಿ ನಗರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳ ಸುಸ್ಥಿತಿಯಲ್ಲಿರುವಂತೆ ಕ್ರಮವಹಿಸುವುದು, ಹಾವೇರಿ ನಗರ ಸೇರಿದಂತೆ ವಸತಿ ವ್ಯವಸ್ಥೆ ಕಲ್ಪಿಸಿರುವ ಪ್ರದೇಶಗಳಲ್ಲಿ ನಿರಂತರ ವಿದ್ಯುತ್ ಸಂಪರ್ಕ, ಜನರ ಸುಕ್ಷರತೆಗೆ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಿದರು.

ಹೋಂಗಾರ್ಡ್, ಎನ್.ಸಿ.ಸಿ., ಎನ್.ಎಸ್.ಎಸ್. ಸ್ವಯಂ ಸೇವಕರ ಬಳಕೆ, ಅಗ್ನಿಶಾಮ ವಾಹನಗಳ ಹೆಚ್ಚುವರಿ ನಿಯೋಜನೆ, ಅಬಕಾರಿ ಇಲಾಖೆ ಸಮ್ಮೇಳನದ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಶಿಷ್ಟಾಚಾರದ ಪ್ರಕಾರ ಸಮ್ಮೇಳನದ ಸರ್ವಾಧ್ಯಕ್ಷರು ಹಾಗೂ ಗಣ್ಯರಿಗೆ ಭದ್ರತಾ ವ್ಯವಸ್ಥೆ, ವೇದಿಕೆಯಲ್ಲಿ ಆಸನ ವ್ಯವಸ್ಥೆ, ವಾಹನಗಳ ವ್ಯವಸ್ಥೆ ಕುರಿತಂತೆ ಚರ್ಚಿಸಲಾಯಿತು. ಸಮ್ಮೇಳನಕ್ಕೆ ಆಗಮಿಸುವ ಗಣ್ಯರು ಹಾಗೂ ಕಲಾವಿದರು, ಸಾಹಿತಿಗಳು, ಜಿಲ್ಲಾವಾರು ಪ್ರತಿನಿಧಿಗಳ  ವಾಸ್ತವ್ಯ ಸ್ಥಳಗಳಿಗೆ ಭದ್ರತಾ ವ್ಯವಸ್ಥೆ, ವಿಶೇಷವಾಗಿ ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಕುರಿತಂತೆ ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಸದಸ್ಯಕಾರ್ಯದರ್ಶಿ ಡಿ.ವೈ.ಎಸ್.ಪಿ.ವಿಜಯಕುಮಾರ ಸಂತೋಷ್, ಅಗ್ನಿಶಾಮಕ ದಳದ ನೋಡಲ್ ಅಧಿಕಾರಿ ಸೋಮಶೇಖರ ಅಗಡಿ, ಅಬಕಾರಿ ಇಲಾಖೆಯ ನಾಗವ್ವ ಮಣ್ಣನವರ, ಹೋಂ ಗಾರ್ಡ್ ಕಮಾಂಡೆಂಟ್ ಪ್ರಭಾಕರ ಮಂಟೂರ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ವಿಭಾಗದ ಶಿರಸ್ತೇದಾರ ಡಿ.ಎನ್.ಕುಲಕರ್ಣಿ, ಸಾರಿಗೆ ಇಲಾಖೆಯ ಶ್ರೀಪಾದ, ಹೆಸ್ಕಾಂ ಇಲಾಖೆಯ ಇಂಜನೀಯರ್ ಮರಿಗೌಡರ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]