
ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯಿಂದ ಹತ್ತು ವಾರಗಳ ಓದುವ ಬೆಳಕು ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಚಿಕ್ಕತುಮಕೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಹೆಣ್ಣು ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಮುಖಂಡರಾದ ತಿ.ರಂಗರಾಜು, ಆದಿತ್ಯನಾಗೇಶ್, ಕೆಂಪಣ್ಣ, ಸಿಡಿಪಿಒ ಅನಿತಾಲಕ್ಷ್ಮಿ, ಪಿಡಿಒ ಪ್ರಕಾಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

