ದೊಡ್ಡಬಳ್ಳಾಪುರ: ಎಂ.ಎಸ್.ವಿ.ಪಬ್ಲಿಕ್ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯ ಆವರಣದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ.ಸುಬ್ರಮಣ್ಯ ಧ್ವಜಾರೋಹಣವನ್ನು ನೆರವೇರಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಸ್ಪರ್ಧಾ ಯುಗದಲ್ಲಿ ಸಾಮಾನ್ಯ ಜ್ಞಾನದ ಅರಿವು ಬಹುಮುಖ್ಯ. ಮಕ್ಕಳು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ರಾಷ್ಟ್ರ ಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ರೈತ ಹಾಗೂ ಸೈನಿಕರನ್ನು ಸದಾ ನೆನೆಯುತ್ತಾ ಗೌರವ ತೋರಬೇಕಾದ ಕರ್ತವ್ಯ ನಮ್ಮೆಲ್ಲರದು. ರಾಷ್ಟ್ರದ ಆಸ್ತಿಯನ್ನು ರಕ್ಷಿಸಿ, ಗುರು ಹಿರಿಯರಿಗೆ ಗೌರವ ನೀಡಬೇಕೆಂದು ತಿಳಿಸಿದರು.
ಪ್ರಾಂಶುಪಾಲರಾದ ನಾಗರತ್ನ.ಎನ್.ಪಾಲನ್ ಮಾತನಾಡಿ, ರಾಷ್ಟ್ರ ಕಟ್ಟಿದ ಹೋರಾಟಗಾರರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನ, ಸಂಘರ್ಷ ಮತ್ತು ಸಂವಿಧಾನ ರಚನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಸ್ಮರಿಸಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ದೇಶಭಕ್ತಿಯನ್ನು ಬಿಂಬಿಸುವ ಸಮೂಹ ಗಾಯನ ಮತ್ತು ಭಾಷಣ ಆಯೋಜಿಸಲಾಗಿತ್ತು. ದೇಶದ ಕುರಿತಾಗಿ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಈ ವೇಳೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.