
ಗೌರಿಬಿದನೂರು: ಪುರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳರನ್ನು ರೆಡ್‌ಹ್ಯಾಡ್ ಆಗಿ ಹಿಡಿದು ಬಂಧಿಸಿ ಅವರಿಂದ ಎರಡು ಲಕ್ಷ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಗುಡಿಬಂಡೆ ಪಟ್ಟಣದ ನಿವಾಸಿಗಳಾದ ಮಂಜುನಾಥ್ (26), ಶ್ರೀನಿವಾಸ್ (48) ಬಂಧಿತ ದ್ವಿಚಕ್ರ ವಾಹನ ಕಳ್ಳರು.
ಕಾರ್ಯಾಚರಣೆ ವಿವರ: ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ವಿರೋಧಿಸಿ ರೈತ ಸಂಘದ ಕರೆನೀಡಿದ್ದ ಬೆಂಗಳೂರು ಟ್ರ್ಯಾಕ್ಟರ್ ಪೆರೇಡನ್ನು ಹಮ್ಮಿಕೊಂಡಿದ್ದ ವೇಳೆ. ಮಂಗಳವಾರ ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಗೌರಿಬಿದನೂರು ಪುರ ಠಾಣೆ ಪಿಎಸ್ಸೈ ಚಂದ್ರಿಕಾ ಹಾಗೂ ಅವರ ಸಿಬ್ಬಂದಿ ಬೆಂಗಳೂರಿಗೆ ತೆರಳುವ ವಾಹನಗಳ ತಪಾಸಣೆ ಮಾಡುತ್ತಿದ್ದರು, ಈ ವೇಳೆ ನಗರದ ನಾಗಪ್ಪ ಬ್ಲಾಕ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹೀರೋ ಸ್ಪ್ಲೆಂಡರ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದನ್ನು ಗಮನಿಸಿದ ಸಿಬ್ಬಂದಿ ಅವರನ್ನು ತಡೆಯಲು ಮುಂದಾದ ವೇಳೆ ಸವಾರ ಪರಾರಿಯಾಗಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ಅವರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ವಾಹನವನ್ನು ಕಳವು ಮಾಡಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ.
ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಮಾರು 2 ಲಕ್ಷ ಮೌಲ್ಯದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

