
ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ಅಕ್ರಮವಾಗಿ ಖಾಸಗಿ ಜಮೀನಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕುರಿತು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ಮಾಹಿತಿ ನೀಡಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕೈಗಾರಿಕಾ ಪ್ರದೇಶಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವು ಕಾರ್ಖಾನೆಗಳು ನಿಯಮ ಬಾಹಿರವಾಗಿ ರಾಸಾಯನಿಕ ಯುಕ್ತ ತ್ಯಾಜ್ಯವನ್ನು ಬೇಕಾಬಿಟ್ಟಿಯಾಗಿ ಸುಮಾರು ಇಪ್ಪತ್ತು ಎಕರೆ ಖಾಸಗಿ ಜಮೀನಲ್ಲಿ ಸುರಿಯುತ್ತಿರುವುದಲ್ಲದೆ, ಬೆಂಕಿ ಹಚ್ಚುತ್ತಿರುವರಿಂದ ಈ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯ ಉಂಟಾಗುವ ಜೊತೆಗೆ ಅಂರ್ತಜಲ ಹಾಳಾಗುತ್ತಿದೆ. ಈ ಕುರಿತು ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಹಾಗೂಪರಿಸರ ಮಾಲಿನ್ಯ ಇಲಾಖೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಅಕ್ರೊಶ ವ್ಯಕ್ತಪಡಿಸಿದರು.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪರಿಸರ ಮಾಲಿನ್ಯ ಇಲಾಖೆ ಅಧಿಕಾರಿ ಸುನೀತಾ, ನಿಯಮ ಬಾಹಿರವಾಗಿ ತ್ಯಾಜ್ಯ ಸುರಿಯುತ್ತಿರುವ ಕಾರ್ಖಾನೆಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಸಂಘನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಮೇಶ್ ವಿರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್ ವೇಣು,ಪ್ರಧಾನ ಸಂಚಾಲಕ ಕಾರಳ್ಳಿ ಮಂಜು ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

