ಬೆಂ.ಗ್ರಾ.ಜಿಲ್ಲೆ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಿ, ಉಗುಳುವುದು ನಿಷೇಧ / ಆದೇಶ ಉಲ್ಲಂಘಿಸಿದರೆ ಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ಬೆಂ.ಗ್ರಾ.ಜಿಲ್ಲೆ: ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ಆದರೂ ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮೇಲೆ ದಿಢೀರ್ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಜಗಿಯುವವರ ವಿರುದ್ಧ ಆರೋಗ್ಯ ಇಲಾಖೆಯವರು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ದಂಡ ವಿಧಿಸುವುದರಂದಿಗೆ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಜನರನ್ನು ತಂಬಾಕು ಸೇವನೆಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಗಜ ಅಂತರದಲ್ಲಿ ಧೂಮಪಾನ ಮಾಡುವುದು, ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದರಲ್ಲದೆ, ಈ ಕುರಿತು ಶಾಲೆಗಳಲ್ಲಿ ಗೋಡೆ ಬರಹ ಬರೆಯುವಂತೆ ತಿಳಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕಿನ ವಿವಿಧ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಸಾಧಿಸಿ ಪೋಲಿಸ್ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರ ವಿರುದ್ಧ ಹಾಗೂ ಮಾರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ನೇತೃತ್ವದಲ್ಲಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದರಲ್ಲದೆ,  ಸಾರ್ವಜನಿಕ ಶಿಕ್ಷಣ ಇಲಾಖೆಯು ಸಹಕಾರ ನೀಡಬೇಕೆಂದು ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ವಿದ್ಯಾ ಮಾತನಾಡಿ, ತಂಬಾಕು ದುಷ್ಪರಿಣಾಮ ಕುರಿತು 100 ಶಾಲೆಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಗುರಿಯನ್ನು ಹೊಂದಲಾಗಿದ್ದು, ಈವರೆಗೂ ಕೋವಿಡ್ ಕಾರಣದಿಂದ 13 ಶಾಲೆಗಳಿಗೆ ಮಾತ್ರ ಭೇಟಿ ನೀಡಿ ಅರಿವು ಮೂಡಿಸಲಾಗಿದೆ ಎಂದಾಗ, ಜಿಲ್ಲಾಧಿಕಾರಿ ಅವರು ನೆಪಗಳನ್ನು ಹೇಳದೆ ಫೆಬ್ರವರಿ ಮಾಸಾಂತ್ಯದೊಳಗೆ ನಿಗದಿತ ಗುರಿಗಳನ್ನು ತಲುಪಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಜಿಲ್ಲಾ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಿ 51 ಪ್ರಕರಣಗಳನ್ನು ದಾಖಲಿಸಲಾಗಿದ್ದು, 8750 ರೂ.ಗಳ ದಂಡ ಸಂಗ್ರಹಿಸಲಾಗಿದ್ದು, ಸ್ವತಃ ತಂಬಾಕು ತ್ಯಜಿಸಲು ಮುಂದಾಗುವವರಿಗೆ ದೊಡ್ಡಬಳ್ಳಾಪುರ ಆರೋಗ್ಯ ಕೇಂದ್ರದಲ್ಲಿ ಕೌನ್ಸೆಲಿಂಗ್ ಮಾಡಗುತ್ತಿದೆ ಎಂದು ಮಾಹಿತಿ ನೀಡಿದರು.

ಅಸಿಸ್ಟಂಟ್ ಸಬ್ ಇನ್ಸ್‌ಪೆಕ್ಟರ್‌ ತ್ಯಾಗರಾಜು ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ತಂಬಾಕು ಸೇವನೆ ನಿಯಂತ್ರಣದಡಿಯಲ್ಲಿ 2502 ಪ್ರಕರಣಗಳನ್ನು ದಾಖಲಿಸಲಾಗಿದ್ದು, 2,58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಾಂತಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]