
ದೊಡ್ಡಬಳ್ಳಾಪುರ: ಬೆಂಕಿ ತಗುಲಿದ ಪರಿಣಾಮ ಬಣವೆ ಹಾಕಲಾಗಿದ್ದ ನಾಲ್ಕು ಲೋಡ್ ರಾಗಿ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಹಾಡೋನಹಳ್ಳಿ ಗ್ರಾಮದ ಚೌಡಣ್ಣ ಎನ್ನುವರು, ರಾಗಿ ಹುಲ್ಲನ್ನು ಬಣವೆ ಮಾಡಿದ್ದು ಇಂದು 12ಗಂಟೆ ವೇಳೆಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿಯನ್ನು ನಂಧಿಸಲು ಸ್ಥಳೀಯರು ಹರಸಾಹಸ ಪಟ್ಟರು ಅಸಾಧ್ಯವಾದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂಧಿಸುತ್ತಿದ್ದಾರೆ.
ಘಟನೆಯಲ್ಲಿ ಸಾವಿರಾರು ಮೌಲ್ಯದ ಹುಲ್ಲು ಬೆಂಕಿಗೆ ಆಹುತಿಯಾಗಿದ್ದು, ರೈತ ಚೌಡಣ್ಣ ಸಾಕಿರುವ ಹಸುಗಳಿಗೆ ಹುಲ್ಲನ್ನು ಖರೀದಿ ಮಾಡಬೇಕಾದ ಅನಿರ್ವಾರ್ಯತೆ ಎದುರಾಗಿದೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲವಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

