
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರ ಸ್ಥಾನದ ಚುನಾವಣೆ ಸಭೆಯಲ್ಲಿ ರೂಪ ಮರಿಯಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 09 ಗಂಟೆಯಿಂದ 10 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು.
ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರಿಗೆ ಜಿಲ್ಲಾ ಪಂಚಾಯತಿ ಸದಸ್ಯರಾದ ರೂಪ ಮರಿಯಪ್ಪ ಅವರು ಒಬ್ಬರು ನಾಮಪತ್ರ ಸಲ್ಲಿಸಿದ್ದರು. ನಂತರ ನಾಮಪತ್ರ ಪರಿಶೀಲನೆ ಕಾರ್ಯ ಹಾಗೂ ನಾಮಪತ್ರ ಕ್ರಮಬದ್ಧವಾಗಿದ್ದರಿಂದ ಅಂಗೀಕಾರವಾಯಿತು.
ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರ ಚುನಾವಣಾ ಸಭೆಯಲ್ಲಿ ಹಾಜರಾಗಿದ್ದ 15 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರೆಲ್ಲರೂ ರೂಪ ಮರಿಯಪ್ಪ ಪರವಾಗಿ ಸಹಿ ಹಾಕುವ ಮೂಲಕ ನೂತನ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

