
ನವದೆಹಲಿ: 2021 ರ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಅಭಿಯಾನಕ್ಕೆ ರಾಷ್ಟ್ರಪತಿಗಳದ ರಾಮ್ ನಾಥ್ ಕೋವಿಂದ್ ಚಾಲನೆ ನೀಡಿದರು.
ಇಂದು ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಹನಿಗಳನ್ನು ನೀಡುವ ಮೂಲಕ ಅಧ್ಯಕ್ಷ ಕೋವಿಂದ್ ಪಲ್ಸ್ ಪೋಲಿಯೊ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜ.31 ರಿಂದ ಫೆ.3ರವರೆಗೆ ನಡೆಯಲಿರುವ 2021ನೇ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಿಲಾಗಿದೆ.
ಅಭಿಯಾನದ ಅಂಗವಾಗಿ 477 ಬೂತ್ಗಳು ಹಾಗೂ 80 ಟ್ರಾನ್ಸಿಸ್ಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 105379 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 1338 ಕಠಿಣ ಪ್ರದೇಶಗಳನ್ನು (ಹೆಚ್.ಆರ್.ಎ) ಗುರುತಿಸಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಲಾಗಿದ್ದು, ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಲಾಗಿದೆ.
ಪೋಲಿಯೋ ಲಸಿಕೆ ಹಾಕಲು ಒಟ್ಟು 2076 ಸಿಬ್ಬಂದಿಗಳು ಹಾಗೂ ಮೇಲ್ವಿಚಾರಣೆಗಾಗಿ 101 ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹತ್ತಿರದ ಪೋಲಿಯೋ ಬೂತ್ನ ಮಾಹಿತಿಗಾಗಿ ‘Nearby Vaccination Centre Karnataka’ ಆ್ಯಂಡ್ರಾಯ್ಡ್ ಆ್ಯಪ್ನಲ್ಲಿ ಪಡೆಯಬಹುದಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ 5 ವರ್ಷದೊಳಗಿನ ಪ್ರತಿ ಮಗುವಿಗೆ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೋಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

