ಹೊಸಕೋಟೆಯಲ್ಲಿ ಹೈಡ್ರಾಮ / ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆಗೆ ಕುಳಿತ ಶಾಸಕ‌ ಶರತ್ ಬಚ್ಚೇಗೌಡ

ಹೊಸಕೋಟೆ: ನಗರಸಭೆಯ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲು ಸ್ಥಳೀಯ ಶಾಸಕರನ್ನು ಕಡೆಗಣಿಸಿರುವ ಬಗ್ಗೆ ಪ್ರಶ್ನೆ ಮಾಡಲು ತೆರಳಿದ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರ ಮೇಲೆ ಪೊಲೀಸರು ಲಾಠಿ ಚಾರ್ಚ್ ಮಾಡಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ನೇತೃತ್ವದಲ್ಲಿ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ತಾಲೂಕಿನಲ್ಲಿ ಜನರಿಂದ ಮತ ಪಡೆದು ಸಂವಿಧಾನದಡಿಯಲ್ಲಿ ಆಯ್ಕೆ ಮಾಡಿದ ನನ್ನನ್ನು ಕಡೆಗಣಿಸಿ, ಸಚಿವ ಎಂಟಿಬಿ ನಾಗರಾಜ್ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ಮಾಡುವ ಮೂಲಕ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಪ್ರಭಾವ ಬಳಸಿ ನನ್ನ ಬೆಂಬಲಿಗರನ್ನೆ ಗುರಿಯಾಗಿರಿಸಿಕೊಂಡು,  ಪೊಲೀಸರ ಮೂಲಕ ಲಾಠಿ ಚಾರ್ಚ್ ಮಾಡಿಸುವ ಕೆಲಸ ಮಾಡಿಸಿದ್ದಾರೆ. ಈ ವೇಳೆ ಸುಮಾರು ಐದಾರು ಜನರಿಗೆ ಪೆಟ್ಟಾಗಿದೆ. ಸಚಿವರ ಅಣತಿಯಂತೆ ವರ್ತಿಸುತ್ತಿರುವ ಪೊಲೀಸರ ಕ್ರಮವನ್ನು ಖಂಡಿಸುತ್ತೇನೆ. ಎಂದರು.

ಈ ವೇಳೆ ಶಾಸಕ ಶರತ್ ಬಚ್ಚೇಗೌಡರನ್ನು‌ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ರವಿ ಡಿ.ಚನ್ನಣ್ಣನವರ್ ಹಾಗೂ ಹಿರಿಯ ಅಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ಮಣಿಯದೆ ಲಾಠಿ ಚಾರ್ಜ್ ಮಾಡಿದ ಡಿವೈಎಸ್‍ಪಿಯವರನ್ನು ಸ್ಥಳಕ್ಕೆ ಕರೆಸಬೇಕೆಂದು ಪಟ್ಟುಹಿಡಿದರು. 

ನಗರದಲ್ಲಿ ನಡೆದ ಶಿಷ್ಟಾಚಾರ ಉಲ್ಲಂಘನೆ, ಕ್ಷೇತ್ರದಲ್ಲಿ ಪೊಲೀಸರ ಅಧಿಕಾರ ವೈಫಲ್ಯ, ಲಾಠಿ ಚಾರ್ಚ್ ಬಗ್ಗೆ ಸೋಮವಾರ ವಿಧಾನಸಭೆ ಅಧಿವೇಶದನಲ್ಲಿ ಸಭಾಧ್ಯಕ್ಷರ ಅನುಮತಿ ಪಡೆದು ಚರ್ಚೆ ಮಾಡುತ್ತೇನೆ. ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ. ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಅನುಮತಿ ಪಡೆಯದೆ ಅಧಿಕಾರ ದುರುಪಯೋಗಪಡಿಸಿಕೊಂಡು ಲಾಠಿ ಚಾರ್ಚ್ ಮಾಡಿದ ಡಿವೈಎಸ್‍ಪಿ ಉಮಾಶಂಕರ್, ಸಿಪಿಐ ರಂಗಸ್ವಾಮಿ, ಎಸ್ಸೈ ರಾಜು ಅವರ ವಿರುದ್ದ ಎಸ್‍ಪಿ ಅವರಿಗೆ ದೂರು ನೀಡಲಾಗಿದೆ. ಐಜಿಗೂ ಸಹ ದೂರು ನೀಡಲಿದ್ದು, ಮೂರು ದಿನಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸದಿದ್ದಲ್ಲಿ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಮಂಜುನಾಥ್, ಬಿ.ವಿ.ಬೈರೇಗೌಡ, ಕೆ.ಎಸ್.ಸುರೇಶ್, ಬಿ.ವಿ.ರಾಜಶೇಖರ್‍ಗೌಡ, ಗೋಪಾಲ್, ಟಿ.ಎಸ್.ರಾಜಶೇಖರ್, ನಗರಸಭೆ ಸದಸ್ಯರಾದ ಕೇಶವಮೂರ್ತಿ, ಗೌತಮ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ (Sringeri) ಶಾಸಕ (MLA) ಡಿ.ಎನ್.ಜೀವರಾಜ್ (D.N. Jeevaraj) ಅವರಿಗೆ ಸ್ಪೀಕರ್ ಯು.ಟಿ.ಖಾದರ್ (U.T. Khader) ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ.‌ ಆದ್ದರಿಂದ ರಾಜ್ಯಪಾಲರೇ (Governor) ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ

[ccc_my_favorite_select_button post_id="121777"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]