
ದೊಡ್ಡಬಳ್ಳಾಪುರ: ಪಲ್ಸ್ ಪೋಲಿಯೊ ಲಸಿಕೆ ವಿತರಣೆ ತಾಲೂಕಿನಾಧ್ಯಂತ ಭಾನುವಾರ ಹಮ್ಮಿಕೊಂಡಿದೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಜ.31ರಿಂದ ಫೆಬ್ರವರಿ 3ರವರೆಗೆ ನಡೆಯಲಿರುವ 2021ನೇ ಸಾಲಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.
ಜ.31ರಂದು ಒಟ್ಟು 152 ಬೂತ್‍ಗಳಲ್ಲಿ 5ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುವುದು.
ತಾಲ್ಲೂಕಿನಲ್ಲಿ 30,348 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 648 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. ಫೆ.1ರಿಂದ 3ರವರೆಗೆ ಮನೆ ಭೇಟಿ ನೀಡಿ, ಲಸಿಕೆ ಹಾಕಿಸಿರುವ ಅನುಪಾಲನೆ ಮಾಡಲಾಗುವುದು. ಜ.31ರಂದು ಬೆಳಿಗ್ಗೆ 7ಕ್ಕೆ ಶಾಸಕ ಟಿ. ವೆಂಕಟರಮಣಯ್ಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

