
ದೊಡ್ಡಬಳ್ಳಾಪುರ: ಇಂದಿನಿಂದ ಫೆ.3 ರವರೆಗೆ ನಡೆಯಲಿರುವ 2021ನೇ ಸಾಲಿನ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದೀಪ ಬೆಳಗಿಸಿ, ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿಗಾಗಿ ತಾಲ್ಲೂಕು ಆಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇಂದು ತಾಲೂಕಿನ ಒಟ್ಟು 152 ಬೂತ್‍ಗಳಲ್ಲಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತಿದೆ
ತಾಲ್ಲೂಕಿನಲ್ಲಿ 30,348 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 648 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. ಪೋಷಕರು ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

