
ದೊಡ್ಡಬಳ್ಳಾಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಸರಬರಾಜು ಮಾಡುವ ರೈತರಿಗೆ ಫೆ.8ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಅಡಿಯಲ್ಲಿ ರಾಗಿ ಖರೀದಿ ಕೇಂದ್ರ – 1 ಮತ್ತು 2 ಮಳಿಗೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಸರಬರಾಜು ಮಾಡಲು ರೈತರಿಗೆ ಫೆ.2ರಿಂದ 6ವರೆಗೆ ನಿಗದಿಪಡಿಸಲಾಗಿದ್ದ ದಿನಾಂಕವನ್ನು ಫೆ.8ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

