
ಬೆಂ.ಗ್ರಾ.ಜಿಲ್ಲೆ: ಬಸವಣ್ಣನವರ ಸಮಕಾಲೀನರಾದ ಮಡಿವಾಳ ಮಾಚಿದೇವರು ತಮ್ಮ ವಚನಗಳಿಂದ ಸಮಾಜದ ಕಳಂಕ ತೊಳೆದು, ಸಮಾನತೆಯನ್ನು ಸಾರುವ ಮೂಲಕ ಸಮಾಜದ ಕಣ್ಣನ್ನು ತೆರೆಸಿದವರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಮಡಿವಾಳ ಮಾಚಿದೇವರ ಜಯಂತಿ” ಆಚರಣೆಯಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿ, ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಅಶಾಂತಿ, ರಾಜಕೀಯ, ಜಾತೀಯತೆ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಸಮಾನತೆ ಹಾಗೂ ಅಶಾಂತಿ ಹೋಗಲಾಡಿಸುವಲ್ಲಿ ಮಾಚಿದೇವರ ವಚನಗಳು ದಾರಿ ದೀವಿಗೆಯಾಗಿವೆ ಎಂದರು.
ವಚನಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು, ಮೌಢ್ಯತೆಯನ್ನು ತೊಡೆದು ಹಾಕುವ ಮೂಲಕ ಕಲ್ಯಾಣ ಕ್ರಾಂತಿಯಲ್ಲಿ ಭಾಗವಹಿಸಿ ಸಮಾಜದ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ಧರ್ಮೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಆರಾಧ್ಯ.ಬಿ., ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ರಾಜೀವಲೋಚನ, ಇಂದ್ರಮ್ಮ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

