
ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಇ-ಕಾರ್ಟ್(R-Cart) (ಹಣ್ಣು & ತರಕಾರಿಗಳನ್ನು ಮಾರುವ ಎಲೆಕ್ಟ್ರಿಕ್ ವಾಹನ) ಮತ್ತು ಕುರಿ/ಮೇಕೆ ಘಟಕ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಫಲಾನುಭವಿಗಳು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕು ಕಚೇರಿಗಳಲ್ಲಿ ಅರ್ಜಿಗಳನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ 2021ರ ಫೆಬ್ರವರಿ 20ರೊಳಗೆ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-29787448, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080-27623681, ಹೊಸಕೋಟೆ ದೂ.ಸಂ.: 080-27931528 ಹಾಗೂ ನೆಲಮಂಗಲ ದೂ.ಸಂ.: 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

