
ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1.00 ಲಕ್ಷಗಳ ಮಿತಿಯಿರಬೇಕು.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‍ಸೈಟ್ www.bcwd.Karnataka.gov.in ಇಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2021ರ ಫೆಬ್ರವರಿ 10 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿ, ಕೊಠಡಿ ಸಂಖ್ಯೆ: 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ಸಹಾಯವಾಣಿ ದೂ.ಸಂ.: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

