ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಒತ್ತಾಯಿಸಿ ಬೃಹತ್ ಸಮಾವೇಶ: ಮಲ್ಲೇಶ್

ದೊಡ್ಡಬಳ್ಳಾಪುರ: ಕರ್ನಾಟಕದ ಇಡೀ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.7ರಂದು ಕುರುಬ ಎಸ್.ಟಿ ಹೋರಾಟ ಸಮಿತಿ ವತಿಯಿಂದ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಮಲ್ಲೇಶ್ ತಿಳಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕುರುಬ ಸಮುದಾಯ ಬುಡಕಟ್ಟು ಜನಾಂಗದಿಂದ ಗುರುತಿಸಿಕೊಂಡಿದ್ದು ಈ ಹಿಂದೆ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಇತ್ತು. ಮೂರು ಜಿಲ್ಲೆಗಳಿಂದ ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸುವ ಪ್ರಸ್ತಾಪ ಕೇಂದ್ರಕ್ಕೆ ಹೋಗಿದೆ. ಆದರೆ ಕೊಡಗಿನ ಪ್ರಸ್ತಾಪ ವಾಪಸ್ ಬಂದಿದೆ. ಈ ಎರಡೂ ಪ್ರಸ್ತಾವನೆಗಳೊಂದಿಗೆ ಇಡೀ ಕರ್ನಾಟಕದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲು ಕುರುಬ ಎಸ್.ಟಿ ಹೋರಾಟ ಸಮಿತಿ ರಚನೆ ಮಾಡಲಾಗಿದೆ. ಎಸ್.ಟಿ ಸಮುದಾಯದವರು ಶೇ.3 ರಿಂದ 7ಕ್ಕೆ ಮೀಸಲಾತಿ ಬೇಡಿಕೆ ಇಟ್ಟಿದ್ದು,  ಅದಕ್ಕೆ ನಮ್ಮ ಬೆಂಬಲವಿದೆ. ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣಕ್ಕೆ ತೊಂದರೆ ಕೊಡುವ ಉದ್ದೇಶ ನಮಗಿಲ್ಲ. ನಮಗಿರುವ ಹಕ್ಕನ್ನು ನಾವು ಕೇಳುತ್ತಿದ್ದೇವೆ. ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಒತ್ತಾಯಿಸಿ ಜನವರಿ 15ರಿಂದ ನಿರಂಜನಾಶ್ರೀಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದ್ದು, ಪಾದಯಾತ್ರೆ ಪೂರ್ಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಚಿವ ಎಂ.ಟಿ.ಬಿ ನಾಗರಾಜ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರ ನೇತೃತ್ವದಲ್ಲಿ ಸಮಾವೇಶಕ್ಕೆ  ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ತಾಲೂಕು ಕುರುಬರ ಸಂಘದ ಗೌರವ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಒತ್ತಾಯಿಸಿ ಜ.7ರಂದು ಬೆಂಗಳೂರಿನ ಮಾದಾವರದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ. ಸಮಾವೇಶಕ್ಕೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಅನುಕೂಲವಿದ್ದವರು ತಮ್ಮ ಸ್ವಂತ ವಾಹನಗಳಲ್ಲಿ ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮುದಾಯದ ಹೋರಾಟಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಕುರುಬರ ಸಂಘದ ಖಜಾಂಚಿ ಅರಣ್ ಕುಮಾರ್, ಮುಖಂಡರಾದ ಸತೀಶ್, ಚಂದ್ರಶೇಖರ್, ಮುನಿಕೃಷ್ಣಪ್ಪ, ಮುರಳಿ, ಗೋಪಿ, ಮಾರಣ್ಣ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ವಿಜಯ್‌ಗೆ ಬೆಂಬಲ ನೀಡಿದ ಕಾಂಗ್ರೆಸ್

ದ್ರಾವಿಡರ ನಾಡು ತಮಿಳುನಾಡಿನಲ್ಲಿ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಟಿವಿಕೆ (TVK) ಪಕ್ಷದ ಮುಖಂಡ ವಿಜಯ್ (Vijay) ಅವರು ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

[ccc_my_favorite_select_button post_id="121783"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]