ಬೆಂ.ಗ್ರಾ.ಜಿಲ್ಲೆ: ಕ್ರೀಡಾ ವಸತಿ ನಿಲಯಗಳ ಪ್ರವೇಶಕ್ಕೆ ಫೆ. 5 ರಿಂದ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಆರಂಭ

ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ 2021-22ನೇ ಸಾಲಿಗೆ ಜಿಲ್ಲಾ/ರಾಜ್ಯ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶಕ್ಕೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿರುವ ದಿನಾಂಕ ಮತ್ತು ಸ್ಥಳಗಳನ್ನು ನಿಗದಿಗೊಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ನಡೆಸಲಾದ ಆಯ್ಕೆ ಪ್ರಕ್ರಿಯೆಯಲ್ಲಿ 8ನೇ ತರಗತಿಗೆ ಕ್ರೀಡಾ ವಸತಿ ನಿಲಯಕ್ಕೆ ಅರ್ಹಗೊಂಡಿರುವ ಕ್ರೀಡಾಪಟುಗಳು ವರದಿ ಮಾಡಿಕೊಳ್ಳುವುದು. 

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ದಿನಾಂಕ 05.02.2021 ರಂದು ಕಿರಿಯರ ವಿಭಾಗ, 06.02.2021 ರಂದು ಹಿರಿಯರ ವಿಭಾಗದ ಅಥ್ಲೆಟಿಕ್ಸ್, ಬ್ಯಾಸ್ಕೆಟ್‍ಬಾಲ್, ಪುಟ್ಬಾಲ್, ಹಾಕಿ ಮತ್ತು ವಾಲಿಬಾಲ್ ಕ್ರೀಡೆಗಳು ಹಾಗೂ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 07.02.2021 ರಂದು ಕಿರಿಯರ ವಿಭಾಗ, 08.02.2021 ರಂದು ಹಿರಿಯರ ವಿಭಾಗದ ಅಥ್ಲೆಟಿಕ್ಸ್, ಈಜು, ಬ್ಯಾಸ್ಕೆಟ್‍ಬಾಲ್, ಪುಟ್ಬಾಲ್, ಜಿಮ್ನಾಸ್ಟಿಕ್, ಹಾಕಿ, ಜುಡೋ, ವಾಲಿಬಾಲ್, ಕುಸ್ತಿ, ಆರ್ಚರಿ, ಫೆನ್ಸಿಂಗ್ ಕ್ರೀಡೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8ನೇ ತರಗತಿ ಪ್ರವೇಶಕ್ಕೆ ತಾಲ್ಲೂಕು ಮಟ್ಟದಲ್ಲಿ ಆಯ್ಕೆಗೊಂಡ ಕ್ರೀಡಾಪಟುಗಳು ನೇರವಾಗಿ ಅಥವಾ ಸಂಬಂಧಪಟ್ಟ ಶಾಲೆಯ ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರೊಂದಿಗೆ ನಿಗದಿತ ಅರ್ಜಿ ನಮೂನೆ ಮತ್ತು ಸಂಬಂಧಪಟ್ಟ ದಾಖಲೆಗಳೊಂದಿಗೆ ಹಾಜರಾಗುವುದು.

ಪ್ರಥಮ ಪಿಯುಸಿಗೆ ಕ್ರೀಡಾ ವಸತಿ ನಿಲಯದಲ್ಲಿ ಪ್ರವೇಶ ಪಡೆಯಲು ಇಚ್ಚಿಸುವರು ನೇರವಾಗಿ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದು.  ಅರ್ಹರಿಗೆ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. 

ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಸಾಮಾನ್ಯ ಬಸ್‍ದರ ನೀಡಲಾಗುವುದು.  ಬಸ್ ಟಿಕೇಟ್‍ನ್ನು ಇಲಾಖೆಯಿಂದ ನಿಯೋಜಿಸಿರುವ ಸಿಬ್ಬಂದಿಗೆ ನೀಡತಕ್ಕದ್ದು. 

ಆಯ್ಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಶಿಸ್ತಿನಿಂದ ವರ್ತಿಸುವುದು ಮತ್ತು ಕಡ್ಡಾಯವಾಗಿ ಕೋವಿಡ್ ಸೂಚನೆಗಳನ್ನು ಪಾಲಿಸುವುದು.  ಮಾಸ್ಕ್ ಧರಿಸುವುದು.  

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂ.ಸಂ.: 080-29787443 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ವಿಜಯ್‌ಗೆ ಬೆಂಬಲ.. ಡಿಎಂಕೆಗೆ ಕೈ ಕೊಟ್ಟ ಕಾಂಗ್ರೆಸ್‌ ಎಂದು ಆರ್‌.ಅಶೋಕ ವಾಗ್ದಾಳಿ

ತಮಿಳುನಾಡಲ್ಲಿ (Tamil Nadu) ಡಿಎಂಕೆ (DMK) ಜೊತೆ ಚುನಾವಣೆ ಎದುರಿಸಿದ ಕಾಂಗ್ರೆಸ್‌ (Congress), ಈಗ ಅದೇ ಪಕ್ಷಕ್ಕೆ ಕೈ ಕೊಟ್ಟಿದೆ. ಇಂಡಿ ಒಕ್ಕೂಟದ ಮಿತ್ರಪಕ್ಷಗಳು ಈ ಬಗ್ಗೆ ಪರಾಮರ್ಶೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ

[ccc_my_favorite_select_button post_id="121795"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]