
ದೊಡ್ಡಬಳ್ಳಾಪುರ: ಲೇಖಕ ಪ್ರೊ.ಕೆ.ಎಸ್.ಭಗವಾನ್ ಅವರ ಮೇಲೆ ನ್ಯಾಯಾಯಲಯದ ಆವರಣದಲ್ಲಿ ಮುಖಕ್ಕೆ ಮಸಿ ಬಳಿದಿರುವ ಘಟನೆಯನ್ನು ಖಂಡಿಸಿ ಹಾಗೂ ಘಟನೆಗೆ ಕಾರಣರಾದ ವಕೀಲರ ಮೇಲೆ ಕಾನೂನು ಕ್ರಮ ಕೈಗೊಂಡು ಅವರ ವಕೀಲ ಸದಸ್ಯತ್ವವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ(ಸ್ವಾಭಿಮಾನ) ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಿವಿಸಿ ರಾಜ್ಯಧ್ಯಕ್ಷ ಮುನಿಆಂಜನಪ್ಪ, ಬೆಂಗಳೂರು ಗ್ರಾಮಾಂತರ ಜಲ್ಲಾಧ್ಯಕ್ಷ ಹನುಮಣ್ಣ ಗೂಳ್ಯ, ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾಗಿದ್ದರೂ ಇಂದಿಗೂ ಸಹ ಜಾತೀಯತೆ, ಅಸಮಾನತೆ ಶೋಷಣೆಗಳು ನಡೆಯುತ್ತಿವೆ.ದಲಿತರು ಹಾಗೂ ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಇಂತಹದರ ವಿರುದ್ದ ಸಮಾಜ ತಿದ್ದುವ ಕಾರ್ಯ ಮಾಡುತ್ತಿದ್ದ ಪ್ರೊ.ಕೆ.ಎಸ್.ಭಗವಾನ್ ಅವರು, ಪ್ರಕರಣವೊಂದರ ವಿಚಾರಣೆ ಮುಗಿಸಿ ಹೊರಬರುತ್ತಿದ್ದಾಗ ಅವರ ಮೇಲೆ ನ್ಯಾಯಾಲಯದ ಆವರಣದಲ್ಲಿ ವಕೀಲರಾದ ಮೀರಾ ರಾಘವೇಂದ್ರ ಅವರು ಮಸಿ ಬಳಿದು ದೌರ್ಜನ್ಯವೆಸಗಿದ್ದಾರೆ. ಈ ಪ್ರಕರಣದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.ಕೂಡಲೇ ವಕೀಲರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ವಕೀಲ ಸದಸ್ಯತ್ವವನ್ನು ರದ್ದುಮಾಡಬೇಕು. ಹಾಗೂ ಭಗವಾನ್ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಿವಿಸಿ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆಯೊಬ್ಖಾನ್, ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಚನ್ನಮರಿಯಪ್ಪ. ದೊಡ್ಡಬಳ್ಳಾಪುರ ತಾಲೂಕಿನ ಅಧ್ಯಕ್ಷ ಪುನೀತ್, ಉಪಾಧ್ಯಕ್ಷ ರಾಜಶೇಖರ್, ಕಾರ್ಯದರ್ಶಿ ಲೋಕೇಶ್, ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

