
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 7 ರಂದು ಭಾನುವಾರ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎನ್.ರೋಹಿತ್ ತಿಳಿಸಿದ್ದಾರೆ.
ಸದರಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಚೈತನ್ಯನಗರ, ವಿದ್ಯಾನಗರ, ಭುವನೇಶ್ವರಿನಗರ, ತೇರಿನಬೀದಿ, ಕುಚ್ಚಪ್ಪನಪೇಟೆ, ವೀರಭದ್ರನಪಾಳ್ಯ, ಕನಕದಾಸ ರಸ್ತೆ, ಎಳ್ಳುಪುರ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಕೆ.ಎಸ್.ಎಸ್.ಐ.ಡಿ.ಸಿ, ಬಾಶೆಟ್ಟಿಹಳ್ಳಿ, ಕೆಐಎಡಿಬಿ ಕೈಗಾರಿಕಾ ಪ್ರದೇಶ ಮತ್ತು ಫೀಡರ್ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

