
ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿಯ ಅಂಗನವಾಡಿ ಕೇಂದ್ರ ಎರಡರಲ್ಲಿ ಪೋಷಣ್ ಅಭಿಯಾನ – ಪೌಷ್ಟಿಕ ಕರ್ನಾಟಕ ಯೋಜನೆಯ ಅಂಗವಾಗಿ ಸುಪೋಷಣ ದಿವಸವನ್ನು ಆಯೋಜಿಸಲಾಗಿತ್ತು.
ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಮಹಿಳಾ ಸಹಾಯಕಿ ರಾಜಮ್ಮ, ಸರ್ಕಾರಿ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಸಿದ್ದರಾಮಪ್ಪ, ಶಿಕ್ಷಕ ಎಂ.ಎನ್.ರಾಜಣ್ಣ ಪೌಷ್ಟಿಕಾಂಶ ಯುಕ್ತ ಆಹಾರ ಸೇವನೆಯ ಅನುಕೂಲ, ಹಸಿರು ತರಕಾರಿ, ಸೊಪ್ಪು, ಸ್ಥಳೀಯವಾಗಿ ಸಿಗುವ ತರಕಾರಿ ಮತ್ತು ಹಣ್ಣುಗಳ ಸೇವನೆಯಿಂದ ದೇಹಕ್ಕಾಗುವ ಅನುಕೂಲದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರಾದ ನವೀನ್ ಕುಮಾರ್, ತಿಪ್ಪರಾಜು, ವೆಂಕಟರಮಣಪ್ಪ, ರಾಧ, ಮಾಜಿ ಅಧ್ಯಕ್ಷ ಕೆಂಪಲಿಂಗಣ್ಣ, ಅಂಗನವಾಡಿ ಕಾರ್ಯಕರ್ತೆ ಶಕುಂತಲಮ್ಮ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

