
ದೊಡ್ಡಬಳ್ಳಾಪುರ: ತಾಲೂಕಿನ ಹಿರಿಯ ಪತ್ರಕರ್ತೆ ವಿ.ವಿಮಲಮ್ಮ(68) ಶನಿವಾರ ಸಂಜೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹಿಳಾ ಶಕ್ತಿ ಪತ್ರಿಕಾ ಸಂಪಾದಕರಾಗಿ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದ ಅವರು, ತಾಲೂಕು ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್ನ ಟ್ರಸ್ಟೀಗಳಾಗಿ ಸೇವೆ ಸಲ್ಲಿಸಿದ್ದರು.
ವಿಮಲಮ್ಮ ಅವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿ ಟ್ರಸ್ಟ್, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

