
ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದ ಆಸ್ಪತ್ರೆಯಲ್ಲಿ ಎರಡನೇ ಹಂತದ ಕರೊನಾ ಲಸಿಕೆಯನ್ನು ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಪಡೆದರು.
ಈ ವೇಳೆ ಮಾತನಾಡಿದ ಅವರು, ಕರೊನಾ ಲಸಿಕೆ ಸುರಕ್ಷಿತವಾಗಿತ್ತು, ನೊಂದಾಯಿತ ಕರೊನಾ ವಾರಿಯರ್ಸ್‌ಗಳು ಯಾವುದೇ ಆತಂಕವಿಲ್ಲದೆ ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.
ಮೊದಲನೇ ಹಂತದ ಲಸಿಕಾ ಕಾರ್ಯಕ್ರಮದ ನಂತರ ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಒಂದು ವಾರದ ಕಾಲ ನಡೆಯಲಿದ್ದು ಈ ಹಂತದಲ್ಲಿ ಪೊಲೀಸ್ ಇಲಾಖೆ, ಪಂಚಾಯಿತ್ ರಾಜ್ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕದಳ, ಹೋಂಗಾರ್ಡ್ಸ್ ಗಳಿಗೆ ನೀಡಲಾಗುತ್ತಿದೆ.
ಈ ವೇಳೆ ಲಸಿಕೆ ಪಡೆದ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹೂ ನೀಡಿ ಅಭಿನಂದಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

