
ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಟಿವಿ, ಬೈಕ್ ಹಾಗೂ ಫ್ರಿಡ್ಜ್ ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್ ಹೊಂದಿದ್ದರೆ ಕೂಡಲೇ ಕಾರ್ಡ್ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಬಿಜೆಪಿ ಕಾರ್ಯಕಾರ್ತರಾದಿಯಾಗಿ ಸಚಿವರ ಹೇಳಿಕೆಯನ್ನು ವಿರೋಧಿಸುತ್ತಿದ್ದಾರೆ.
ಇದಲ್ಲದೆ, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಹಾಗೂ 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರು BPL ಕಾರ್ಡ್ ಹೊಂದಲು ಸಾಧ್ಯವಿಲ್ಲ ಎಂದು ಸಹ ಹೇಳಿದರು. ಇಂಥ BPL ಕಾರ್ಡ್ಗಳನ್ನ ಮಾ.31ರೊಳಗೆ ಹಿಂದಿರುಗಿಸಬೇಕು. ಇಲ್ಲದಿದ್ರೆ ನಾವೇ ಸರ್ವೆ ಮಾಡಿ ವಾಪಸ್ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಕತ್ತಿ ವಿರುದ್ದ ಜನತೆ ತರಾವರಿ ಕಾಮೆಂಟ್ ಮಾಡಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಪೆಟ್ರೋಲ್ / ಡಿಸೇಲ್/ ಎಲ್ಪಿಜಿ ಬೆಲೆ ಏರಿಕೆಯ ಒತ್ತಡದಿಂದ ಬಸವಳಿಯುತ್ತಿರುವ ಜನತೆ ಸಚಿವ ಕತ್ತಿ ಹೇಳಿಕೆಯಿಂದಾಗಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜನತೆಯ ಕೆಂಗಣ್ಣಿಗೆ ಒಳಗಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..

