ಗ್ರಾಮಪಂಚಾಯಿತಿ ನೂತನ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ / ಗೈರಾಗುವ ಸದಸ್ಯರ ವಿರುದ್ದ ಶಿಸ್ತು ಕ್ರಮ

ದೊಡ್ಡಬಳ್ಳಾಪುರ: ಇತ್ತೀಚೆಗೆ ನಡೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಸದಸ್ಯರಿಗೆ ನಗರ ತಾಲೂಕು ಪಂಚಾಯಿತಿ ಹಿಂಬಾಗದಲ್ಲಿನ ಸಾಮರ್ಥ್ಯ ಸೌಧದಲ್ಲಿ  ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಆರಂಭಿಸಲಾಯಿತು.

ತರಬೇತಿ ಕಾರ್ಯಕ್ರಮವನ್ನು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಕಾರ್ಯದರ್ಶಿ ಕೆ.ಕರಿಯಪ್ಪ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬ ಗ್ರಾಮಪಂಚಾಯಿತಿ ಸದಸ್ಯರೂ ಕೂಡ ಗೈರಾಗದೆ ತರಬೇತಿಯ ಅನುಕೂಲತೆಗಳನ್ನು ಪಡೆದು ಕೊಳ್ಳಬೇಕು, ಸದಸ್ಯರಿಗೆ ಬೇಕಾದ ಊಟ ,ಉಪಹಾರದ ವ್ಯವಸ್ಥೆ ಯನ್ನು ಕಲ್ಪಿಸಲಾಗಿದೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಾತಿ ಕಡೆ ಹೆಚ್ಚು ಗಮನಹರಿಸಬೇಕು, ಗೈರಾದ ಸದಸ್ಯರ ಪಟ್ಟಿಯನ್ನು ಮೇಲಿನ ಅಧಿಕಾರಿಗಳಿಗೆ ನೀಡಬೇಕಿದೆ. ತರಬೇತಿಗೆ ಗೈರಾಗುವ ಸದಸ್ಯರ ವಿರುದ್ದ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದರು.

ಚುನಾಯಿತ ಸದಸ್ಯರು ಗ್ರಾಮಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಬೇಕು, ಯಾವುದೇ ಕುಂದು ಕೊರತೆ ಬಂದರೆ ತಾಲೂಕು ಪಂಚಾಯಿತಿ ಇಒ ಅವರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು‌.

ತಾಪಂ ಕಾರ್ಯನಿರ್ವಹಣಾಧಿಕಾರಿ ಸಿ.ಮುರುಡಯ್ಯ ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡುವ ಸಲುವಾಗಿ ಈ ತರಬೇತಿ ಆಯೋಜಿಸಲಾಗಿದೆ. 

ಎರಡು ಗ್ರಾಮಪಂಚಾಯಿತಿಗಳ ಸದಸ್ಯರನ್ನು ಸೇರಿಸಿ 5ದಿನಗಳ ಕಾಲ ತರಬೇತಿ ನೀಡಲಾಗುತ್ತಿದ್ದು, 25 ಗ್ರಾಮಪಂಚಾಯಿತಿಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು.

ಈ ತರಬೇತಿಯಲ್ಲಿ ಗ್ರಾಪಂಗಳ ಅಭಿವೃದ್ಧಿ ಹೇಗೆ ಎಂಬ ಕುರಿತಾದ ಮಾಹಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯಿತಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಸಂಕ್ಷಿಪ್ತವಾಗಿ ಎಲ್ಲಾ ಸದಸ್ಯರು ತಿಳಿದುಕೊಂಡು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ತಾಪಂ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಗ್ರಾಮಪಂಚಾಯಿತಿಯ ಅಭಿವೃದ್ಧಿ ಕನಸು ಹೊತ್ತು ಚುನಾವಣೆಯಲ್ಲಿ ಜಯಗಳಿಸಿದ ಎಲ್ಲ ಸದಸ್ಯರು ಈ ತರಬೇತಿಯ ಅನುಕೂಲಗಳನ್ನು ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಬೇಕಿದೆ. ಯಾವುದೇ ಪಕ್ಷಪಾತವಿಲ್ಲದೆ ಶಿಸ್ತಿನಿಂದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಬೇಕಿದೆ. ಪ್ರತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಪ್ರಶ್ನಿಸಿ ಅಭಿವೃದ್ಧಿ ಪಥದಲ್ಲಿ ನಡೆಯಿರಿ ಎಂದು ಸದಸ್ಯರಿಗೆ ಸಲಹೆ ನೀಡಿದರು.

ಈ ವೇಳೆ ಪಿಡಿಒಗಳಾದ ಮುನಿಯಾ ನಾಯ್ಕ್, ರಮಿತ, ತರಬೇತುದಾರ ಬೈಲಾಜನಮೂರ್ತಿ, ಸಹಾಯಕ ನಿರ್ದೇಶಕ ಗಂಗರಾಜು, ವ್ಯವಸ್ಥಾಪಕ ಗಂಗಾರಂಗಯ್ಯ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!