
ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು *2021ರ ಮಾರ್ಚ್ 15* ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆಸಕ್ತರು, ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು *2021ರ ಮಾರ್ಚ್ 15* ಕೊನೆಯ ದಿನವಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳ, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ, ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ, ದೂ.ಸಂ.: 080-7931528, ನೆಲಮಂಗಲ, ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

