
ದೊಡ್ಡಬಳ್ಳಾಪುರ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದ್ದಿಯೋರ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಕುರುಬರಹಳ್ಳಿ ಸಮೀಪ ಸಂಭವಿಸಿದೆ.
ದಾಬಸ್ ಪೇಟೆ ಕಡೆಗೆ ತೆರಳುತ್ತಿದ್ದ ಲಾರಿ ದ್ವಿಚಕ್ರ ವಾಹನವನ್ನು ಹಿಂದಿಕ್ಕು ವೇಳೆ, ದೊಡ್ಡಬಳ್ಳಾಪುರದ ಕಡೆ ಬರುತ್ತಿದ್ದ ಮಾರುತಿ ಆಮ್ನಿ ಕಾರಿಗೆ ಗುದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಮಧುವೆಯ ಆರಕ್ಷತೆಯ ಭದ್ರತಾ ಕಾರ್ಯಕ್ಕೆ ತೆರಳುತ್ತಿದ್ದ ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುಲಿಕುಂಟೆಯ ಹನುಮಯ್ಯ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

