ಬೆಲೆ ಏರಿಕೆ ಖಂಡಿಸಿ ಕರವೆ ಪ್ರವೀಣ್ ಶೆಟ್ಟಿ ಬಣದಿಂದ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದನ್ನ ಖಂಡಿಸಿ ಕರವೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಸಿದ್ದಲಿಂಗಯ್ಯ ವೃತ್ತದಿಂದ ಬೈಕ್ಗಳನ್ನು ತಳ್ಳಿಕೊಂಡು ಖಾಲಿ ಸಿಲಿಂಡರ್ ಮೆರವಣಿಗೆ ಮಾಡಿ ತಾಲ್ಲೂಕು ಕಚೇರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು, ಕಳೆದ ವರ್ಷದಿಂದ ಇಡೀ ಜಗತ್ತನ್ನೆ ಕಾಡಿದ ಮಹಾಮಾರಿ ಕರೊನಾ ವೈರಸ್ ಭಾರತದ ಮಧ್ಯಮ ವರ್ಗದವರ ಪಾಲಿಗೆ ಸಹಿಸಲಾರದ ಪೆಟ್ಟು ನೀಡಿತ್ತು‌ ಹಲವಾರು ಕಂಪನಿಗಳು ಬಾಗಿಲು ಮುಚ್ಚಿದ ಪರಿಣಾಮ ಕಾರ್ಮಿಕರು ನಿರುದ್ಯೋಗಿಗಳಾದರು. ವ್ಯಾಪಾರ, ವ್ಯವಹಾರ ನೆಲ ಕಚ್ಚಿದವು, ದಿನಗೂಲಿ ನೌಕರರು ಊಟಕ್ಕು ಪರದಾಡುವಂತಾಗಿದೆ‌. ಇಂತಹ ಸಮಯದಲ್ಲಿ ಜನರ ಸಹಾಯಕ್ಕೆ ಬರಬೇಕಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಗಾಯದ ಮೇಲೆ ಬರೆ ಎಳೆದಂತೆ ಡಿಸೇಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಬೆಲೆಗಳನ್ನು ಸತತವಾಗಿ ಏರಿಸುತ್ತಿವೆ. ಗ್ಯಾಸ್ ಮೇಲಿನ ಸಬ್ಸಿಡಿ ರದ್ದುಗೊಳಿಸಿದಲ್ಲದೆ, 50ರೂ ಹೆಚ್ಚು ಮಾಡಿರುವ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿ ಮಧ್ಯಮ ವರ್ಗದ ಹಾಗೂ ಕಡುಬಡತನದಲ್ಲಿರುವ ಜನತೆಯ ಬದುಕು ನಡೆಸಲು ಅಸಾಧ್ಯವಾದಂತ ದುಸ್ತರ ಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಸರ್ಕಾರಗಳು ಜನ ವಿರೋಧಿ ಬೆಲೆ ಏರಿಕೆಗೆ ಕಡಿವಾಣ ಹಾಕಿ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಕೇಂದ್ರ ಸರ್ಕಾರದ ಮೇಲಿನ ಭರವಸೆಯಿಂದ ಎರಡನೇ ಬಾರಿಗೆ ಅತಿ ಹೆಚ್ಚು ಮತಗಳನ್ನು ನೀಡಿ ಅಧಿಕಾರ ನೀಡಲಾಯಿತು. ಆದರೆ ಇತ್ತೀಚಿನ ನಡುವಳಿಕೆ ಜನರನ್ನು ಭ್ರಮ ನಿರಸರನ್ನಾಗಿಸುತ್ತಿದೆ. ನಾವೂ ಕೂಡ ಮೋದಿ ಅಭಿಮಾನಿಗಳೇ. ಆದರೆ ಮಾಡಿದನ್ನೆಲ್ಲ ಸರಿ ಏನ್ನುವ ಅಂದಾಭಿಮಾನವಲ್ಲ. ಕೂಡಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಚ್ಚೆತ್ತುಕೊಳ್ಳಬೇಕೆಂದರು.

ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹ ಮೂರ್ತಿ ಮಾತನಾಡಿ, ಕರೊನಾ ಸಂಕಷ್ಟದಿಂದ ನರಳಿ, ಉದ್ಯೋಗದಿಂದ ವಂಚಿತರಾದ ಕಷ್ಟದ ನಡುವೆ, ಅಗತ್ಯ ವಸ್ತುಗಳ ಈ ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳ ಬೆಲೆ ಸಹ ತೀವ್ರವಾಗಿ ಏರಿಕೆಯಾಗಿ, ಜನ ಸಾಮಾನ್ಯ ಜೀವನವನ್ನ ಬುಡಮೇಲು ಮಾಡುತ್ತಿದೆ. ರಾಜಕೀಯ ಉದ್ದೇಶಕ್ಕೆ ಜನವಿರೋಧಿ ನೀತಿ ಮೂಲಕ ಉದ್ದಟ್ಟತನ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಈ ರೀತಿಯ ಆಂದೋಲನ ಮೂಲಕ ಜನತೆಯನ್ನು ಜಾಗೃತರಾಗಬೇಕಿದೆ ಎಂದು ಮನವಿ‌‌ ಮಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾ ನಿರತರು, ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಮೇಶ್ ವಿರಜ್, ಗೌರವಾಧ್ಯಕ್ಷ ಪು.ಮಹೇಶ್, ಖಜಾಂಚಿ ಆನಂದ್,  ಸಂಚಾಲಕ ಕಾರಹಳ್ಳಿ ಮಂಜು ಕಾರ್ಯಾಧ್ಯಕ್ಷ ಮಹೇಶ್, ಜಿಲ್ಲಾ ಅನಗರ ಅಧ್ಯಕ್ಷ ಬಶೀರ್, ಯಲಹಂಕ ಅಧ್ಯಕ್ಷ ಜಯಂತ್, ರಾಖಿ, ಸುನಿ ಲ, ಟಾಟಾಸುನಿ, ಲೋಕೇಶ್ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]