
ದೊಡ್ಡಬಳ್ಳಾಪುರ: ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಯನ್ನು ಮೂಲವಾಗಿರಿಸಿ ತನಿಖೆ ನಡೆಸುವ ಮೂಲಕ ಆರೋಪಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ನ್ಯಾಯವಾದಿ ಟಿ.ಕೆ.ಹನುಮಂತರಾಜು ಎನ್ನುವವರು ಎಸಿಬಿಗೆ ದೂರು ನೀಡಿದ್ದಾರೆ.
ಬುಧವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಎಸಿಬಿ ವತಿಯಿಂದ ನಡೆದ ಸಾರ್ವಜನಿಕರ ಕುಂದು-ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಈ ಕುರಿತು ದೂರು ನೀಡಿದ್ದಾರೆ.
ದೂರಿನ ಮಾಹಿತಿ: ಫೆ.9ರಂದು ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ವ್ಯಾಪಕ ಭ್ರಷಾಚಾರ “ಭೂಮಿ ತಿದ್ದುಪಡಿಗೆ ವರ್ಷ ಗಟ್ಟಲೆ ತಿರುಗಿದರೂ ಹಣ ಕೊಡದೆ ತಿದ್ದುಪಡಿಯಾಗುತ್ತಿಲ್ಲ, ಒಂದು ತಿದ್ದುಪಡಿಗೆ ಸುಮಾರು 5 ಲಕ್ಷ ರೂ. ವರೆಗೆ ಹಣವನ್ನು ನೀಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಸುದ್ದಿಯಾಗಿರುತ್ತದೆ.
ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಯಂತೆ ಯಾವ ಅಧಿಕಾರಿ/ನೌಕರ ಹಣಕ್ಕಾಗಿ ಒತ್ತಾಯ ಮಾಡುತ್ತಾರೆ ಎನ್ನುವುದರ ಕುರಿತು ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

