ನಾನು ಯಾವ ಪಂಥಕ್ಕು ಸೇರದೆ ಕೆಲಸ ಮಾಡಿ ತೋರಿಸುವೆ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಹಟ್ಟಿ

ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸಭಾಪತಿಗಳ ರಾಜೀನಾಮೆ, ಆ ನಂತರದ ಬೆಳವಣಿಗಳಿಂದ ಜನರಲ್ಲಿ ವಿಧಾನ ಪರಿಷತ್ ಹಾಗೂ ಸಭಾಪತಿ ಸ್ಥಾನದ ಬಗ್ಗೆ ಇದ್ದ ನಂಬಿಕೆಗೆ ಧಕ್ಕೆಯಾಗಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಿ ತೋರಿಸುವ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಹಟ್ಟಿ ಹೇಳಿದರು.

ಅವರು ಬುಧವಾರ ಸಂಜೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, 114 ವರ್ಷಗಳ ಇತಿಹಾಸವನ್ನು ಹೊಂದಿರುವ ರಾಜ್ಯದ ವಿಧಾನ ಪರಿಷತ್ತಿನ ಗೌರವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಪರಿಷತ್ನ ಎಲ್ಲಾ 75 ಜನ ಸದಸ್ಯರೊಂದಿಗು ಮಾತನಾಡಿದ್ದೇನೆ. ಸದನವನ್ನು ಉತ್ತಮ ರೀತಿಯಲ್ಲಿ ನಡೆಯುವಂತೆ ಮಾಡಲಾಗುವುದು. ಕಲಾಪ ನಡೆಯುವ ಸಂದರ್ಭದಲ್ಲಿ ಸದಸ್ಯರು ಮೊಬೈಲ್ಗಳನ್ನು ಒಳಗೆ ತರದಂತೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಸದನದ ಒಳಗೆ ಬರುವ ಮುನ್ನ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಇಟ್ಟು ಕೊಳ್ಳಲು ಪ್ರತ್ಯೇಕ ಲಾಕರ್ಗಳನ್ನು ಮಾಡಿಸಲಾಗುತ್ತಿದೆ. ಮಂಗಳವಾರ, ಬುಧವಾರ ಹಾಗೂ ಗುರುವಾರ ಎಲ್ಲಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.

ನಾನು ಯಾವ ಮೂಲ ಅಥವಾ ಪಕ್ಷದಿಂದ ಬೆಳೆದು ಬಂದಿದ್ದೇನೆ ಎನ್ನುವುದಕ್ಕಿಂತಲು ನಾನು ಬಲಪಂಥೀಯ, ಎಡಪಂಥೀಯ ಎರಡೂ ಅಲ್ಲದೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಸರ್ಕಾರದ ತಪ್ಪುಗಳಿದ್ದರು ಸಹ ಯಾವುದೇ ಅಂಜಿಕೆ ಇಲ್ಲದೆ ತಿಳಿ ಹೇಳುವೆ. ಪಕ್ಷಪಾತ ಇಲ್ಲದೆ ಕೆಲಸ ಮಾಡುವುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ನೋಡಬಹುದಾಗಿದೆ. ನನಗೆ ದೇವರು ಬುದ್ದಿ ನೀಡಿದ ರೀತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ ಎಂದರು.

‘ಜೆಡಿಎಸ್ ಸಂಘಟನೆ ಹಿಂದುಳಿದಿರುವ ಈ ಸಂದರ್ಭದಲ್ಲಿ ತಾವು ಸಭಾಪತಿ ಸ್ಥಾನದಲ್ಲಿ ಕುಳಿತರೆ ಪಕ್ಷ ಸಂಘಟನೆಗೆ ಹಿನ್ನಡೆಯಾಗುವುದಿಲ್ಲವೇ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಹೊರಹಟ್ಟಿ, ಸಂವಿಧಾನಾತ್ಮಕವಾಗಿ  ರಾಜ್ಯಪಾಲರ ನಂತರದ ಹುದ್ದೆ ವಿಧಾನ ಪರಿಷತ್ ಸಭಾಪತಿಗಳದ್ದು. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಾಗಿದೆ. ನ್ಯಾಯಾಧೀಶರ ಮಗ, ಮಗಳು ತಪ್ಪು ಮಾಡಿದರು ಪ್ರೀತಿ ನೋಡುವಂತಿಲ್ಲ. ಆ ಸ್ಥಾನದ ಗೌರಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಪಕ್ಷದ ಮೇಲಿನ ಪ್ರೀತಿ ಇದ್ದರು ಸಹ ಅದನ್ನು ನುಂಗಿಕೊಂಡು ಸಭಾಪತಿಗಳ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]