ಬೆಂ.ಗ್ರಾ.ಜಿಲ್ಲೆಯನ್ನು ನವ ಬೆಂಗಳೂರು ಎಂದು ಘೋಷಿಸಿ / ದೊಡ್ಡಬಳ್ಳಾಪುರದಲ್ಲಿ ಪೂರ್ವಭಾವಿ ಸಭೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರದ ಹೆಸರಿನ ವಿವಾದ ಎದ್ದಿರುವ ಬೆನ್ನಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ನವ ಬೆಂಗಳೂರು ಎಂದು ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯ ಆರಂಭವಾಗಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ಜಿ.ಎನ್.ಪ್ರದೀಪ್, ಬೆಂಗಳೂರು ನಗರದ ಅಭಿವೃದ್ಧಿ ಹೆಸರಲ್ಲಿ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆ ಬೀಳುತ್ತಿದೆ. ಒಂದು ಕಡೆಯಿಂದ ಗಿಡ ನೆಟ್ಟರೆ ಅದೇ ಗಿಡವನ್ನು ಕಿತ್ತು ರಸ್ತೆ ಹಾಕುತ್ತಾರೆ. ಮತ್ತೆ ಅದೇ ರಸ್ತೆಯನ್ನು ಕಿತ್ತು ಜಲಮಂಡಲಿ ಪೈಪ್‌ಗಳನ್ನು ಅಳವಡಿಸುತ್ತಾರೆ. ಈ ಮೂಲಕ ಬೆಂಗಳೂರು ಅಭಿವೃದ್ಧಿಯಲ್ಲಿ ಗೊಂದಲ ನಿರ್ಮಾಣವಾಗುವ ಮೂಲಕ ಅಭಿವೃದ್ಧಿ ಕುಂಟಿತವಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕೈಗಾರಿಕಾ ಪ್ರದೇಶಗಳು ನಿರ್ಮಾಣವಾಗುತ್ತಿವೆ. ಇದರೊಂದಿಗೆ ದೊಡ್ಡಬಳ್ಳಾಪುರದ ಲಿಂಗನಹಳ್ಳಿ ಸುತ್ತು ಮತ್ತು 12 ಸಾವಿರ ಎಕರೆಯಲ್ಲಿ ಐಟಿ ಪಾರ್ಕ್ ಪ್ರಸ್ತಾವನೆ ಸೇರಿದಂತೆ ಹುಲಿಕುಂಟೆ ಸಮೀಪ ಕೈಗಾರಿಕಾ ಪ್ರದೇಶ ನಿರ್ಮಾಣ ಪ್ರಗತಿ, ಹಾಗು ತಾಲೂಕಿನ ಸರಹದ್ದಿನಲ್ಲೆ ಇರುವ ಬೈರಗೊಂಡಲು ಬಫರ್ ಡ್ಯಾಂ ನಿರ್ಮಾಣ ಹೀಗೆ ಹತ್ತು ಹಲವು ರೀತಿಯಲ್ಲಿ ಜಿಲ್ಲೆ ಬೆಳೆಯುತ್ತಿದೆ. ಅಲ್ಲದೆ ಜಿಲ್ಲೆಯ ವಿವಿಧ ತಾಲೂಕುಗಳ ಮೂಕವೇ ಮುಖ್ಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಹಾದು ಹೋಗುತ್ತಿವೆ. ಹೀಗಾಗಿ ಜಿಲ್ಲೆಯನ್ನು ನವ ಬೆಂಗಳೂರು ಎಂದು ಸರ್ಕಾರ ಘೋಷಣೆ ಮಾಡಿದರೆ ಬೆಂಗಳೂರು ನಗರದ ಅಭಿವೃದ್ಧಿಗೂ ಸಹಕಾರಿಯಾಗಲಿದೆ.

ಇದರೊಂದಿಗೆ ಬೆಂ.ಗ್ರಾ ಜಿಲ್ಲೆಯೂ ಪೂರಕ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನವ ಬೆಂಗಳೂರು ಎಂದು ಘೋಷಿಸಿದರೆ ಹೆಚ್ಚಿನ ಹೊರೆ ಇಲ್ಲದೆ ಈಗಾಗಲೆ  ಅಭಿವೃದ್ಧಿ ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯೂ ಬೆಂಗಳೂರು ನಗರಕ್ಕೆ ಪರ್ಯಾಯ ನಗರ ಆಗುವುದರಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ತಿಳಿಸಿದರು.  

ನಾಲ್ಕೂ ತಾಲೂಕುಗಳು ಒಂದೇ ವೇದಿಕೆಗೆ ಬರಲಿ: ನವ ಬೆಂಗಳೂರು ನಿರ್ಮಾಣದ ಹಂತದಲ್ಲಿ ನಾಲ್ಕೂ ತಾಲೂಕುಗಳ ರಾಜಕೀಯ ಸಾಮ್ಯತೆ ಅಗತ್ಯವಾಗಿದೆ. ಇದರೊಂದಿಗೆ ಎಲ್ಲಾ  ಸಂಘಟನೆಗಳು, ಜನಪ್ರತಿನಿಧಿಗಳು ಒಂದೇ ವೇದಿಕೆಗೆ ಬಂದರೆ ನಮ್ಮ ನವ ಬೆಂಗಳೂರು ಕನಸು ಈಡೇರಲಿದೆ. ಈ ಕರಿತು ಸಭೆಯಲ್ಲಿ ರಾಜಕೀಯ ಮುಖಂಡರು, ಸಂಘಟನೆಗಳು ಕೈಜೊಡಿಬೇಕು ಎಂದು ಮನವಿ ಮಾಡಲಾಯಿತು. 

ಈ ಸಂದರ್ಭದಲ್ಲಿ ಮುಖಂಡ ಸತ್ಯಪ್ರಕಾಶ್ ಮಾತನಾಡಿ, ಜಿಲ್ಲೆಯಲ್ಲಿ”ನಮ್ಮ ತಾಲ್ಲೂಕು ನಮ್ಮ ತಾಲ್ಲೂಕು ಅಂತ ಘರ್ಷಣೆ ಏರ್ಪಟ್ಟು ವೈಷಮ್ಯ ಸಾಧಿಸುವುದಕ್ಕಿಂತ ನಮ್ಮ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಒತ್ತಾಯಿಸುವ ಹೋರಾಟ ನಡೆಸುವುದು ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ಹೋರಾಟಗಾರ ಪ್ರದೀಪ್ ರವರ “ನವ ಬೆಂಗಳೂರು” ಪರಿಕಲ್ಪನೆ ಸರ್ವದೃಷ್ಟಿಯಿಂದಲೂ ಸಕಾರಾತ್ಮಕವಾಗಿದೆ. ಆದ್ದರಿಂದ ನಮ್ಮ ಜಿಲ್ಲೆಯ ಪರವಾಗಿ ನಾವು ನವ ಬೆಂಗಳೂರು ಪರಿಕಲ್ಪನೆಯು ಸಾಕಾರವಾಗಲು ಕಾಯಾ ವಾಚಾ ಮನಸಾ ಬೆಂಬಲವಾಗಿ ನಿಲ್ಲುತ್ತೇವೆ ಎಂದರು.”

ಸಭೆಯಲ್ಲಿ ಪರಿಸರ ಅರವಿಂದ್, ಜೆಡಿಎಸ್ ಮುಖಂಡ ಎಂ.ಹರ್ಷ, ಗ್ರಾಪಂ ಸದಸ್ಯ ಆರ್.ಎಲ್.ಆರಾಧ್ಯ, ಕನ್ನಡ ಪಕ್ಷದ ಮಂಜುನಾಥ್, ಮುಖಂಡ ದೊಡ್ಡತುಮಕೂರು ಆನಂದ್, ರವಿ ನಾಯಕ್(ಚಿನ್ನಿ), ರಮೇಶ್, ಶಿವಪುರ ರಮೇಶ್ ಸೇರಿದಂತೆ ಇತರೆ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]