
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಬಸವ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ರಾಷ್ಟ್ರಧ್ವಜವನ್ನು ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಪರಿಷತ್ ದ್ವಜವನ್ನು ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್, ಕನ್ನಡ ನಾಡ ದ್ವಜವನ್ನು ತಹಶಿಲ್ಧಾರ್ ಟಿ.ಎಸ್.ಶಿವರಾಜ್ ದ್ವಜಾರೋಹಣ ನೆರವೇರಿಸಿದರು.
ನಂತರ ಡಾ.ರಾಜ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಮ್ಮೇಳನಾಧ್ಯಕ್ಷರಾಗಿರುವ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಅವರ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಸಾಹಿತಿಗಳು ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ, ಜಾನಪದ ವೈಭವ ಬಿಂಬಿಸುವ ವಿವಿ್ ಕಲಾತಂಡಗಳು, ಧರ್ಮಸ್ಥಳ ಸಂಸ್ಥೆ ಮಾತೆಯರಿಂದ ಪೂರ್ಣಕುಂಬ ಸ್ವಾಗತ ಮತ್ತು ಮಂಗಳವಾದ್ಯಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.
ನೆಲದಾಂಜನೇಯ ಸ್ವಾಮಿ ದೇವಾಲಯದ ಮೂಲಕ ಸಾಗಿದ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಮಾರುಕಟ್ಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ ಮೂಲಕ ತಾಲೂಕು ಕಚೇರಿ ವೃತ್ತ ಸಾಗಿ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಸಮ್ಮೇಳನ ಸಭಾಂಗಣಕ್ಕೆ ತಲುಪಲಿದೆ.
ಉದ್ಘಾಟನೆ ಸಮಾರಂಭ ಮೆರವಣಿಗೆ ಬಸವಭವನಕ್ಕೆ ತಲುಪಿ, ಸಮ್ಮೇಳನಾಧ್ಯಕ್ಷರು ಸಭಾಂಗಣಕ್ಕೆ ಬಂದ ನಂತರ ಆರಂಭವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

