
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಫ್ರಂಟ್ ಲೈನ್ ವರ್ಕರ್ಸ್ ಗಳು ಶೀಘ್ರವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಂಡವರು ಲಸಿಕೆ ಪಡೆಯಬಹುದಾಗಿದೆ ಹಾಗೂ ಲಸಿಕೆ ಪಡೆಯಲು ನೋಂದಣಿಯಾಗಿದ್ದು, ಆರೋಗ್ಯ ಇಲಾಖೆಯಿಂದ ಮೊಬೈಲ್ ಸಂದೇಶ ಬಂದಿಲ್ಲವೆಂದು ಸುಮ್ಮನೆ ಕೂರದೆ ಹತ್ತಿರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಪಡೆಯುವುದು.
ಫ್ರಂಟ್ ಲೈನ್ ವರ್ಕರ್ಸ್ಗಳು ತಮ್ಮ ಆಧಾರ್ ಕಾರ್ಡ್/ ಯಾವುದಾರೊಂದು ಗುರುತಿನ ಚೀಟಿಯೊಂದಿಗೆ ಬಂದು ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿದ್ದು, ಎಲ್ಲಾ ಕೊರೊನಾ ವಾರಿಯರ್ಸ್ ಗಳು ಹಾಗೂ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾ ದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

