ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿಂದು ನಡೆಯುತ್ತಿರುವ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಎಂಬ ವಿನೂತನ ರಾಜ್ಯ ಮಟ್ಟದ ಕಾರ್ಯಕ್ರಮದ ಅಂಗವಾಗಿ ಸಚಿವರ ಗ್ರಾಮ ವಾಸ್ತವ್ಯದ ವೇಳೆ ಹೊಸಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಕಂದಾಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಅವರೊಂದಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್.,
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಭಾಗಿಯಾದರು.
ಈ ವೇಳೆ ನೆಲಮಂಗಲ ಶಾಸಕ ಡಾ. ಶ್ರೀನಿವಾಸ ಮೂರ್ತಿ “ತರವಲ್ಲ ತಗಿ ನಿನ್ನ ತಂಬೂರಿ” ಎಂದು ಹಾಡಿದರೆ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಶರಣು ಶರಣಯ್ಯ ಶರಣು ಬೆನಕಾ ಎಂದು ಹಾಡುವ ಮೂಲಕ ಸಂಗೀತ ಸಂಜೆಯ ವಾತಾವರಣವನ್ನು ಸೃಷ್ಟಿಸಿದರು.
ಸರಿಗಮಪ ಖ್ಯಾತಿಯ ಪೊಲೀಸ್ ಇಲಾಖೆಯ ವಿ.ಸುಬ್ರಹ್ಮಣ್ಯ ಅವರು ಹಾಡುವ ಮೂಲಕ ಮನರಂಜನೆ ನೀಡಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

