
ದೊಡ್ಡಬಳ್ಳಾಪುರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್ ಕುಮಾರ್ ಇಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದು ವಿವಿಧ ಶಾಲೆಗಳಿಗೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 22 ರಂದು ಮಧ್ಯಾಹ್ನ 12:00 ಗಂಟೆಗೆ, ಸಚಿವರು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಗೆ ಆಗಮಿಸಿ, ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢಶಾಲೆ ಶಾಲೆ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ(ಆಜಾಕ್ಸ್ ಇಂಜಿನಿಯರಿಂಗ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ನಿರ್ಮಿಸಿರುವ ಶಾಲೆ), ಮೆಳೆಕೋಟೆಯ ಸರಕಾರಿ ಪ್ರೌಢಶಾಲೆ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ,ಕೊನಘಟ್ಟದ ಸರಕಾರಿ ಪ್ರೌಢಶಾಲೆ, ರಾಜಘಟ್ಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿವಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ.
ನಂತರ ಸಂಜೆ 04:00 ಗಂಟೆಗೆ ಯಲಹಂಕ ರಸ್ತೆ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ.ಪಿ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಗಳಲ್ಲಿ ಫಾಲೋ ಮಾಡಿ. ನಮ್ಮೊಂದಿಗೆ ಜೊತೆಯಾಗಲು ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

