ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯ ಮುಖ್ಯ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ / ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಶಾಲೆಗಳ ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ಶಾಲಾಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯ ಮುಖ್ಯವಾಗಿದ್ದು, ಹೆಚ್ಚು ಕಾಲ ಶಾಲೆ ಮುಚ್ಚಿದರೆ ದುಡಿಮೆಯತ್ತ ಮಕ್ಕಳು ವಾಲುವ ಸಾಧ್ಯತೆ ಹೆಚ್ಚಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಫೆಬ್ರವರಿ 22 ರಿಂದ 6 – 8ನೇ ತರಗತಿವರೆಗೂ ಶಾಲೆಗಳು ಪ್ರಾರಂಭವಾಗಿದ್ದು, ಪೋಷಕರ ಅನುಮತಿ ನೀಡಿದರೆ ಮಾತ್ರ ವಿದ್ಯಾರ್ಥಿಗಳು ಶಾಲೆಗೆ ಬರಬಹುದು ಎಂದು ತಿಳಿಸಿದರು.

ಬೆಂಗಳೂರು ನಗರ ಹಾಗೂ ಗಡಿ ಭಾಗದ ಶಾಲೆಗಳನ್ನು ಬಿಟ್ಟು ಉಳಿದೆಲ್ಲ ಭಾಗಗಳಲ್ಲಿ ಶಾಲೆಗಳು ಪ್ರಾರಂಭವಾಗಿದ್ದು, ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿರುವುದು ಉತ್ತಮ ಬೆಳವಣಿಗೆ ಎಂದರು.

ರಾಜ್ಯದ ಎಲ್ಲ ಭಾಗಗಳಲ್ಲಿ ಶಾಲೆ ಪ್ರಾರಂಭಿಸುವಂತೆ ವಿದ್ಯಾರ್ಥಿಗಳು ಕೇಳುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂವಾದ ನಡೆಸಲು, ಪ್ರಶ್ನೆ ಕೇಳಲು ಆಗದಿರುವ ಕಾರಣ ಶಾಲೆಗೆ ಬಂದು ಕಲಿಯುವುದು ಉತ್ತಮ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಚಂದನ ಹಾಗೂ ದೂರದರ್ಶನದಲ್ಲಿ ಪಾಠವನ್ನು ಪ್ರಸಾರ ಮಾಡಲಾಗಿತ್ತು. ಕೆಲವು ಪ್ರದೇಶಗಳಲ್ಲಿ ವಿದ್ಯಾಗಮದ ಮೂಲಕ ವಿದ್ಯಾರ್ಥಿಗಳ ಬಳಿಯೇ ತೆರಳಿ ಪಾಠ ಮಾಡಲಾಗುತ್ತಿತ್ತು. ಆದರೆ ಕೆಲವೊಂದು ಕಾರಣಗಳಿಂದ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಲಾಯಿತು ಎಂದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯ ದೃಷ್ಟಿಯಿಂದ ಸಮಯ ಕಡಿಮೆ ಇದ್ದು, ವಿದ್ಯಾರ್ಥಿಗಳಿಗೆ ಹೊರೆ ಆಗದಂತೆ ಶೇ 30 ರಷ್ಟು ಪಠ್ಯವನ್ನು ಕಡಿತಗೊಳಿಸಲಾಗಿದೆ. ಕೆಲವು ಶಾಲೆಗಳಲ್ಲಿ ಪೂರ್ಣ ಪ್ರಮಾಣದ ಪಠ್ಯ ಬೋಧನೆ ಮಾಡುವುದಾಗಿ ಶಿಕ್ಷಕರು ತಿಳಿಸಿದ್ದು, ಕಳೆದ ಶೈಕ್ಷಣಿಕ ವರ್ಷದಲ್ಲಿ 8.50 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು ಎಂದರು.

ಪ್ರಸಕ್ತ ಶೈಕ್ಷಣಿಕ ವರ್ಷವು ವಿದ್ಯಾರ್ಥಿಗಳಿಗೆ ಸವಾಲಿನ ವರ್ಷವಾಗಿದ್ದು, ವಿದ್ಯಾರ್ಥಿಗಳ ಜೀವನದಲ್ಲಿ ನೆನಪಿನಲ್ಲಿರುತ್ತದೆ ಎಂದು ಹೇಳಿದ ಸಚಿವರು ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕ ಪಡುವ ಅಗತ್ಯವಿಲ್ಲ, ದೇಶದಲ್ಲಿ 6 ರಾಜ್ಯದಲ್ಲಿ ಕರೊನಾ 2ನೇ ಹಂತದ ಅಲೆ ಇದ್ದರೂ, ರಾಜ್ಯದಲ್ಲಿ ಎಲ್ಲೂ ವರದಿಯಾಗಿಲ್ಲ ಎಂದರು. 

ಕೋವಿಡ್ ನಿಯಂತ್ರಣದಲ್ಲಿ ದೇಶದಲ್ಲಿಯೇ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಲ್ಲಿ ಯಾವುದೇ ರಾಜಿ ಮಾಡಿರುವುದಿಲ್ಲ. ಶಾಲೆ ಮುಚ್ಚಿದ್ದರ ಪರಿಣಾಮವಾಗಿ ಬಾಲಕಾರ್ಮಿಕತೆ ಮತ್ತು ಬಾಲ್ಯ ವಿವಾಹ ಹೆಚ್ಚಾಗಿರುವುದು ಗಮನಕ್ಕೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯ ಮೂಲಕ ಶಾಲಾ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 3000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಕೆಲವು ಭಾಗಗಳಲ್ಲಿ ನಿವೃತ್ತ ಶಿಕ್ಷಕರು ಸ್ವಯಂ ಪ್ರೇರಣೆಯಿಂದ ವಿದ್ಯಾರ್ಥಿಗಳಿಗೆ ಕಲಿಸಲು ಮುಂದೆ ಬಂದಿದ್ದಾರೆ. ಬಿಸಿ ಊಟ ನೀಡುವ ಸಂಬಂಧ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಅನುಮತಿ ಸಿಕ್ಕ ತಕ್ಷಣವೇ ಮಧ್ಯಾಹ್ನನದ ಬಿಸಿ ಊಟ ನೀಡಲಾಗುವುದು ಎಂದರು. 

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ಸಚಿವರು, ಪರೀಕ್ಷೆ ನಡೆಸುವ ಕುರಿತು ಪ್ರಶ್ನಿಸಿದಾಗ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದ ಎಂದರು. ಎಲ್ಲಾ ವಿದ್ಯಾರ್ಥಿಗಳು ಉಪಾಹಾರ ಸೇವಿಸಿ ಶಾಲೆಗೆ ಬರಬೇಕು ಯಾರು ಸಹ ಉಪವಾಸ ಬರಬಾರದು, ಆರೋಗ್ಯ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಚಿವರು ಸಲಹೆ ನೀಡಿದರು. 

10ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಐಎಎಸ್ ಪರೀಕ್ಷೆ ಪಾಸಗಬೇಕೆಂಬ ಕನಸನ್ನು ಸಚಿವರ ಗಮನಕ್ಕೆ ತಂದಾಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬರುವಂತೆ ಸಚಿವರು ವಿದ್ಯಾರ್ಥಿನಿಗೆ ಶುಭ ಹಾರೈಸಿದರು. 

ಬಳಿಕ, ಸಚಿವರು ಅಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ನಿಂದ ಬಾಶೆಟ್ಟಿಹಳ್ಳಿಯಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್, ಡಿಡಿಪಿಐ ಗಂಗಮಾರೇಗೌಡ, ಬಿಇಒ ಬೈಯಪ್ಪರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಮೂಲಕ ಫಾಲೋ ಮಾಡಿ. ನಮ್ಮೋಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ… 

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]