
ಚಿಕ್ಕಬಳ್ಳಾಪುರ: ಹಿರೇನಾವಲ್ಲಿ ಗ್ರಾಮದ ಬಳಿ ಕಲ್ಲು ಕ್ವಾರಿಯಲ್ಲಿ ಜೆಲೆಟಿನ್ ಸ್ಪೋಟ ದುರಂತ ಸಂಭವಿಸಿ 6ಕ್ಕೂ ಹೆಚ್ಚು ಜನ ಸಾವನಪ್ಪಿದ್ದಾರೆ ಎಂದು ಶಂಕಿಸಲಾಗುತ್ತಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಹಿರೇನಾವಲ್ಲಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರಿ ಸ್ಪೋಟ ದುರಂತ ಸಂಭವಿಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.
ಕ್ವಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಂಜನೀಯರ್ ಉಮಾಕಾಂತ್,ಕಂಪ್ಯೂಟರ್ ಆಪರೇಟರ್ ಗಂಗಾಧರ್ ವಾಚ್ ಮೆನ್ ಮಹೇಶ್ ಸ್ಥಳೀಯ ರಾಮು,ಅಕೌಂಟೆಂಟ್ ಗಂಗಾಧರ ಮೃತ ಪಟ್ಟಿದ್ದಾರೆ ಎನ್ನಲಾಗುದ್ದು, ಮೃತರ ದೇಹಗಳು ಗುರುತು ಸಿಗದಷ್ಟು ಚಿದ್ರ ಚಿದ್ರವಾಗಿವೆ.
ಆರೋಗ್ಯ ಸಚಿವ ಡಾ ಕೆ ಸುಧಾಕರ್ ತವರೂರಿನ ಸಮೀಪದಲ್ಲಿಯೇ ಈ ದುರ್ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ. ಸ್ಥಳಕ್ಕೆ ಆರೋಗ್ಯ ಸಚಿವ ಡಾ ಕೆ ಸುಧಾಕರ್. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಅಕ್ರಮವಾಗಿ ಕಲ್ಲು ಕ್ವಾರಿ ಬ್ಲಾಸ್ಟ್ ಮಾಡಲು ಜಿಲೆಟಿನ್ ಸಂಗ್ರಹಿಸಿದ್ದ ಹಿನ್ನೆಲೆ ಕ್ವಾರಿ ಜಫ್ತಿ ಮಾಡಲಾಗಿತ್ತು ಎನ್ನಲಾಗಿದೆ.ಅಲ್ಲದೆ ನಿನ್ನೆ ಸಂಜೆ ಸಹ ಪೊಲೀಸರು ದಾಳಿ ಮಾಡಿದ್ದರು ಆ ವೇಳೆ ಯಾವುದೇ ತರಹ ಜಿಲೆಟಿನ್ ಸಿಗದ ವಾಪಸ್ಸಾಗಿದ್ದರು.
ಆರೋಗ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ವ ಗ್ರಾಮದಿಂದ ಕೂಗಳತೆ ದೂರದಲ್ಲಿರೋ ಹೀರೇನಾಗವಳ್ಳಿ ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ.
ಗಣಿ ಮಾಲೀಕ ನಾಗರಾಜರೆಡ್ಡಿ, ಗಂಗೋಜಿ ರಾವ್ ಅವರನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಪೊಲೀಸರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಮೂಲಕ ಫಾಲೋ ಮಾಡಿ. ನಮ್ಮೋಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

