
ಬೆಂಗಳೂರು: ಕೋವಿಡ್-19 ಹಿನ್ನಲೆ ಖಾಸಗಿ ಶಾಲೆಗಳ ಕುರಿತು ಕಾಳಜಿ ತೋರದ ಶಿಕ್ಷಣ ಇಲಾಖೆಯ ವೈಫಲ್ಯಗಳನ್ನು ಖಂಡಿಸಿ ಇದು ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಶಿಕ್ಷಕರು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಬೆಂಗಳೂರು ಗ್ರಾಮಾಂತರ, ನಗರ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಖಾಸಗಿ ಶಾಲೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಆಗಮಿಸಿದ್ದು, ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೇ ತಿಂಗಳಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಘೋಷಿಸಲಾದ ಲಾಕ್ ಡೌನ್ ಆರಂಭದಿಂದ ಇದುವರೆಗೂ ಖಾಸಗಿ ಶಾಲೆಗಳ ಸ್ಥಿತಿ ಅದೋಗತಿಯಾಗಿದೆ. ಹಲವು ಶಿಕ್ಷಕರು ಸಾವನಪ್ಪಿದ್ದಾರೆ, ಆದರೂ ಶಿಕ್ಷಣ ಇಲಾಖೆ ಕಾಳಜಿವಹಿಸಿತ್ತಿಲ್ಲ. ಕೋವಿಡ್ನಿಂದ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ. ಈ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಆರ್ಥಿಕ ಪ್ಯಾಕೇಜ್ ಕೂಡ ಘೋಷಿಸಿಲ್ಲ. ಈಗ ಶೇ 30ರಷ್ಟು ಬೋಧನಾ ಶುಲ್ಕ ಕಡಿತ ಮಾಡಿದ್ದಾರೆ. ಆದರೆ, ನೈಜವಾಗಿ ಶೇ 60ರಷ್ಟು ನಷ್ಟ ಶಾಲೆಗಳಿಗೆ ಆಗುತ್ತಿದೆ. ಅಲ್ಲದೆ ಹೊಸ ಹೊಸ ನಿಯಮಗಳಿಂದಾಗಿ ಖಾಸಗಿ ಶಾಲೆಗಳನ್ನು ಮುಚ್ಚಿಸುವ ಶಡ್ಯಂತ್ರ ಶಿಕ್ಷಣ ಇಲಾಖೆ ಮಾಡುತ್ತಿದೆ ಎನ್ನುವುದು ಪ್ರತಿಭಟನಾ ನಿರತರ ಆಕ್ರೋಶಕ್ಕೆ ಕಾರಣವಾಗಿತ್ತು.
ಸ್ಥಳಕ್ಕೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ಆಹವಾಲು ಸ್ವೀಕರಿಸಿ ಸಮಸ್ಯೆ ಬಗೆ ಹರಿಸಲು ಸಂಘದ ಮುಖಂಡರುಗಳ ಸಭೆ ಕರೆಯಲಾಗುವುದೆಂದು ಭರವಸೆ ನೀಡಿದರು.
ಪ್ರತಿಭಟನಾ ರ್ಯಾಲಿಗೆ ಪೊಲೀಸ್ ಬಂದೂ ಬಸ್ತ್ ಏರ್ಪಡಿಸಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಮೂಲಕ ಫಾಲೋ ಮಾಡಿ. ನಮ್ಮೋಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

