
ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇಂದು ನಗರದ ಬಮೂಲ್ ಸಭಾಂಗಣದಲ್ಲಿ ತಾಲೂಕಿನ ಪರಿಶಿಷ್ಟ ಪಂಗಡದ ಸ್ತ್ರೀ ಶಕ್ತಿ ಗುಂಪಿನ ಸದಸ್ಯರಿಗೆ ಮೂರು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಡಿಪಿಒ ಎಸ್.ಅನಿತಾಲಕ್ಷ್ಮೀ ಮಾತನಾಡಿ, ನೂತನವಾಗಿ ರಚೆನೆಯಾಗಿರುವ ಪರಿಶಿಷ್ಟ ಪಂಗಡದ ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆಯ ವಿಷಯಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸುಸ್ಥಿರವಾಗಬಹುದಾಗಿದೆ, ಈ ತರಬೇತಿಯಲ್ಲಿ ಮಹಿಳೆಯರ ಅಭಿವೃದ್ಧಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಮಾಹಿತಿ, ಸ್ಥಳೀಯವಾಗಿ ಬೇಡಿಕೆಯಿರುವ ಸೇವೆಗಳ ಮೂಲಕ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲಾಗುತ್ತಿದೆ.
ಮೂರು ದಿನಗಳ ತರಬೇತಿಯಲ್ಲಿ ಮಾರುಕಟ್ಟೆ ಕೌಶಲ್ಯ, ಕೈತೋಟ ನಿರ್ವಹಣೆ, ಹೈನುಗಾರಿಕೆ, ಲೆಕ್ಕಪತ್ರ ನಿರ್ವಹಣೆ, ಕಂಪ್ಯೂಟರ್ ಕಲಿಕೆ ನೀಡಲಾಗುತ್ತಿದೆ ಎಂದರು.
ಈ ವೇಳೆ ಎಸಿಡಿಪಿಒ ಶಿವಮ್ಮ, ಮೇಲ್ವಿಚಾರಕಿಯರಾದ ತೇಜಸ್ವಿನಿ, ಆಶಾ, ಲಕ್ಷ್ಮೀ, ಪದ್ಮಾ, ಚೈತ್ರ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

