
ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಹ ಸದಸ್ಯತ್ವ ಪಡೆಯಲು ಹೊರಡುವ ಮುನ್ನ ಸ್ವಗ್ರಾಮ ಬೆಂಡಿಗಾನಹಳ್ಳಿಯಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿದರು.
ಶರತ್ ಬಚ್ಚೇಗೌಡರ ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಹೊಸಕೋಟೆ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ವಿರುದ್ದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

