ದೇವಾಂಗ ಜನಾಂಗದಿಂದ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಮಾ.1ರಂದು ದೊಡ್ಡಬಳ್ಳಾಪುರದಲ್ಲಿ ಸಂಘಟನಾ ಸಮಾವೇಶ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ  ದೇವಾಂಗ ಸಮುದಾಯ ಬಹುಸಂಖ್ಯಾತರಾಗಿದ್ದರೂ ಸಹ ರಾಜಕೀಯ ಅಸ್ತಿತ್ವ ಪಡೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ. ಈ ದಿಸೆಯಲ್ಲಿ ದೇವಾಂಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯಕ್ಕೆ ಸಂಕಲ್ಪ, ದೇವಾಂಗ ಸಮುದಾಯದ ಸಮಗ್ರ ಪ್ರಗತಿ ಹಾಗೂ ದೇವಾಂಗ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಗೆ ಒತ್ತಾಯಿಸಿ ಮಾರ್ಚ್ 1ರಂದು ದೇವಾಂಗ ಸಂಘಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಂಗ ಸಮನ್ವಯ ಸಮಿತಿ ಸಂಚಾಲಕ ಎಂ.ಜಿ ಶ್ರೀನಿವಾಸ್ ತಿಳಿಸಿದರು.

ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಮನ್ವಯ ಸಮಿತಿ ವತಿಯಿಂದ ನಡೆದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 52 ಕ್ಷೇತ್ರಗಳಲ್ಲಿ ದೇವಾಂಗ ಸಮುದಾಯದ ಪ್ರಭಾವವಿದ್ದು, 13 ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿದೆ. ಇದರಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರವೂ ಸೇರಿದೆ. ದೊಡ್ಡಬಳ್ಳಾಪುರದಲ್ಲಿ ಈವರೆಗಿನ ಶೇ.75ರಷ್ಟು ಸಮೀಕ್ಷೆ ನಡೆಸಿರುವ ಪ್ರಕಾರ 35 ಸಾವಿರಕ್ಕೂ ಹೆಚ್ಚು ದೇವಾಂಗ ಸಮುದಾಯದವರಿದ್ದಾರೆ.

1932ರಿಂದ ಕೊಂಗಾಡಿಯಪ್ಪನವರು ಪುರಸಭೆಯ ಪ್ರಥಮ ಅಧ್ಯಕ್ಷರಾಗಿದ್ದರಿಂದ ಹಿಡಿದು ಸುಮಾರು 50 ವರ್ಷಗಳವರೆಗೆ ರಾಜಕೀಯವ ವಲಯದಲ್ಲಿ ಹಾಗೂ ವಿವಿಧ ಸಹಕಾರ ಸಂಘಗಳಲ್ಲಿ ದೇವಾಂಗ ಸಮುದಾಯದ ಮುಖಂಡರ ಪಾತ್ರ ಮಹತ್ವದ್ದಾಗಿತ್ತು. ತಾಲೂಕಿನ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದ ಸಮುದಾಯ ಹಲವಾರು ನಾಯಕರನ್ನು ಬೆಳೆಯಲು ಪ್ರೋತ್ಸಾಹಿಸಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ತಮ್ಮ ರಾಜಕೀಯ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಹಿಂದೆ ಸರಿಯುವ ವಾತಾವರಣ ಸೃಷ್ಟಿಯಾಗುತ್ತಿದೆ. ಸಮಾವೇಶ ನಮ್ಮ ಶಕ್ತಿ ಕ್ರೋಢೀಕರಣಗೊಳಿಸಲು ಸಂಘಟಿಸಲಾಗುತ್ತಿದ್ದು, ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರ, ವಿರೋಧವಾಗಿ ಅಲ್ಲ. ಮುಂಬರುವ ದಿನಗಳಲ್ಲಿ ಹಿಂದುಳಿದ ವರ್ಗದವರನ್ನು ಒಗ್ಗೂಡಿಸುವ ಚಿಂತನೆಯಿದೆ ಎಂದರು.

ದೇವಾಂಗ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆಯಾಗಬೇಕು. ಸಮುದಾಯಕ್ಕೆ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಪೂರಕವಾಗಿ ಮೀಸಲು ವ್ಯವಸ್ಥೆಯಾಗಬೇಕು. ರಾಜಕೀಯದಲ್ಲಿ ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು.ಸಮಗ್ರ ಸಂಘಟನೆಗೆ ಎಲ್ಲಾ ಸಂಘಟನೆಗಳನ್ನು ಒಳಗೊಂಡು ಕಾರ್ಯ ನಿರ್ವಹಿಸಬೇಕು. ಸ್ಥಳೀಯ ಸಂಸ್ಥೆ ಸೇರಿ ಆಯಕಟ್ಟಿನ ಹುದ್ದೆಗಳನ್ನು ಪಡೆಯಲು ಸಾಮಾಜಿಕ, ಆರ್ಥಿಕ ಭಾಷೆ ಭಿನ್ನತೆಗಳನ್ನು ಮೀರಿ ಒಗ್ಗೂಡಬೇಕು ಎನ್ನುವ ಧ್ಯೇಯೋದ್ದೇಶಗಳನ್ನು ಸಮಾವೇಶ ಹೊಂದಿದೆ ಎಂದು ತಿಳಿಸಿದರು.

ಮಾರ್ಚ್.1ಕ್ಕೆ ಬೃಹತ್ ಸಮಾವೇಶ: ದೇವಾಂಗ ಸಮನ್ವಯ ಸಮಿತಿ ವತಿಯಿಂದ ಮಾ.1ಕ್ಕೆ ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ದೇವಾಂಗ ಸಂಘಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಹಂಪಿ ಹೇಮಕೂಟದ ಪೀಠಾಧ್ಯಕ್ಷ ದೇವಾಂಗ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಕೆ.ನಾರಾಯಣ, ಆಂಧ್ರದ ದೇವಾಂಗ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ  ಬೀರಕ ಸುರೇಂದ್ರ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರಮೇಶ್ ಮೊದಲಾದವರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ದೇವಾಂಗ ಮಂಡಲಿ ಅಧ್ಯಕ್ಷ ಕೆ.ಜಿ.ದಿನೇಶ್, ಗಾಯಿತ್ರಿ ಪೀಠ ಮಿತ್ರಬಳಗ ಅಧ್ಯಕ್ಷ ಪಿ.ಸಿ.ಲಕ್ಷ್ಮೀನಾರಾಯಣ್, ಆಂಧ್ರ ದೇವಾಂಗ ಸಂಕ್ಷೇಮ ಟ್ರಸ್ಟ್ ಕಾರ್ಯದರ್ಶಿ ಡಿ.ಎ.ಶ್ರೀನಾಥ್, ಟಿ.ಎಂಸಿಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ನಗರಸಭೆ ಮಾಜಿ ಸದಸ್ಯ ಲೋಕೇಶ್ ಬಾಬು, ಆಂಧ್ರ ದೇವಾಂಗ ಸಂಘದ ನಿರ್ದೇಶಕ ಕೇಶವಮೂರ್ತಿ,  ದೇವಾಂಗ ಮಂಡಳಿ ಸಹ ಕಾರ್ಯದರ್ಶಿ ಯೋಗ ನಟರಾಜ್, ನಿರ್ದೇಶಕ ಅಖಿಲೇಶ್, ಮುಖಂಡರಾದ ಕೆರಮುಲು ಬದ್ರಿ, ಶಿವಾನಂದ್, ಎನ್.ಜಿ.ಕುಮಾರ್, ರಮೇಶ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]