
ದೊಡ್ಡಬಳ್ಳಾಪುರ: ತಾಲ್ಲೂಕಿನ ಇತಿಹಾಸ ಪ್ರಸಿದ್ದ ಶ್ರೀಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಫೆ.27 ರಂದು ಮಧ್ಯಾಹ್ನ 1 ಗಂಟೆಗೆ ನಗರದ ತೇರಿನ ಬೀದಿಯಲ್ಲಿ ನಡೆಯಲಿದೆ.
ಬಿಸಿಲಹಳ್ಳಿ ಚಿಕ್ಕಚೌಡಪ್ಪನವರ ಭಜನಾ ಮಂಡಲಿ, ಬಿಸಲಹಳ್ಳಿ ಕುಟುಂಬ ಸೇರಿದಂತೆ ವಿವಿಧ ಮಂಡಲಿಗಳಿಂದ ಅರವಟ್ಟಿಕೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಫೆ.28 ರಂದು ಹಗಲು ಪರಿಷೆ ನಡೆಯಲಿದೆ.
ನೇಯ್ಗೆ ಬೀದಿ ಶಾಲೆಯಲ್ಲಿ 15 ವರ್ಷಗಳಿಂದಲೂ ಅರವಟ್ಟಿಕೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಫೆ.27 ರಂದು ಮಧ್ಯಾಹ್ನ 1.30ರಿಂದ 4 ಗಂಟೆಯವರೆಗೆ ಪ್ರಸಾದ ನೀಡಲಾಗುವುದು ಎಂದು ನಿವೃತ್ತ ದೈಹಿಕ ಶಿಕ್ಷಕ ಬಿ.ಎಸ್.ಶ್ರೀಕಂಠಮೂರ್ತಿ ತಿಳಿಸಿದ್ದಾರೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಇಂದು ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶ್ರೀಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ ಶ್ರದ್ಧಾಭಕ್ತಿಗಳಿಂದ ನೆರವೇರಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

